Published On: Fri, Feb 14th, 2020

ಸಜೀಪಮುನ್ನೂರು ಕಾಂಗ್ರೆಸ್ ಸಮಾವೇಶ

ಬಂಟ್ವಾಳ:ತಾಲೂಕಿನ ಸಜೀಪಮುನ್ನೂರು ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶವು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು.ಮಾಜಿ ಸಚಿವ ಬಿ.ರಮಾನಾಥ ರೈ ಅವರು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ,ರಾಜ್ಯದ ಬಿಜೆಪಿ ಸರಕಾರವು ಎಲ್ಲ ರಂಗದಲ್ಲು ವಿಫಲವಾಗಿದ್ದು,ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಕುಂಠಿತಗೊಂಡಿದೆ ಎಂದು ಟೀಕಿಸಿದರು‌.
IMG-20200214-WA0045ಕೇಂದ್ರಸರಕಾರ ರಾಜ್ಯಕ್ಕೆ ಬಿಡುಗಡೆಗೊಳಿಸಬೇಕಾದ ಅನುದಾನವನ್ನು ಬಿಡುಗಡೆಗೊಳಿಸದೆ ಅನ್ಯಾಯ ಮಾಡಿದೆ.ಇದೀಗ ಅನಿಲ ಬೆಲೆ ಏರಿಕೆ ಮಾಡಿ ಜನವಿರೋಧಿ ನೀತಿಯನ್ನು ಅನುಸರಿಸಿದ್ದು,ಸರಕಾರದ ಈ ನೀತಿಯ ವಿರುದ್ದ ಕಾಂಗ್ರೆಸ್ ಪಕ್ಷ ಪ್ರತಿಭಟನೆಯನ್ನು ಆಯೋಜಿಸಲಿದೆ ಎಂದರು.ಮುಂಬರುವ ಗ್ರಾಪಂ,ತಾಪಂ,ಜಿಪಂ ಚುನಾವಣೆಯು ಎದುರಾಗಲಿದ್ದು,ಕಾರ್ಯಕರ್ತರು ಈಗೀಂದಿಗಲೇ ಗ್ರಾಮೀಣ ಭಾಗದಲ್ಲಿ ಪಕ್ಷ ಸಂಘಟನೆಗೆ ಮುಂದಾಗಬೇಕು ಎಮನದು ಕರೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ,ತಾಲೂಕು ಪಂಚಾಯತ್ ಉಪಧ್ಯಕ್ಷ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಜಯಂತಿ,ಬಂಟ್ವಾಳ ಮಹಿಳಾ ಬ್ಲಾಕ್ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ,ತಾಲೂಕು ಪಂಚಾಯತ್ ಸದಸ್ಯರುಗಳಾದ,ಶಿವಪ್ರಸಾದ್ ಕನಪಾಡಿ,  ನಸೀಮಾ ಬೇಗಂ.ಸಂಜೀವ ಪೂಜಾರಿ ಬೊಳ್ಳಾಯಿ ಮೊದಲಾದವರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter