Published On: Thu, Jun 14th, 2018

ಕಲ್ಲಡ್ಕ: ಕೊಲೆ ಯತ್ನ, ಜಾತಿ ನಿಂದನೆ ಆರೋಪ; ದೂರು

ಬಂಟ್ವಾಳ: ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ತಂಡವು ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ ಜಾತಿ ನಿಂದನೆಗೊಳಿಸಿದ್ದಲ್ಲದೆ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ಸಲ್ಲಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿಗಳನ್ನು ಚಾಲಕ ಯತಿರಾಜ, ಚೇತನ್, ಅಮಿತ್, ಮತ್ತು ರಾಜೇಶ್ ಎಂದು ಗುರುತಿಸಲಾಗಿದೆ.

ಇವರು ಕಳೆದ ಸೋಮವಾರ ಸಂಜೆ ದೊಣ್ಣೆ, ಕತ್ತಿ ಮತ್ತಿತರ ಮಾರಕಾಸ್ತ್ರ ಹಿಡಿದು ಏಕಾಯೇಕಿ ಪರಿಶಿಷ್ಟ ಜಾತಿ ಮಹಿಳೆ ಮನೆಗೆ ನುಗ್ಗಿ ಹಲ್ಲೆ ನಡೆಸಿ ಬಳಿಕ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಉಪವಿಭಾಗ ಡಿವೈಎಸ್ಪಿ ಪ್ರಕರಣದ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

 

 

 

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter