ಮಾಸ್ತಿಕಟ್ಟೆ ಅಂಗನವಾಡಿ ಶಿಕ್ಷಕಿಗೆ ಬೀಳ್ಕೊಡುಗೆ
ಮೂಡುಬಿದಿರೆ : ನಿವೃತ್ತಿ ಹೊಂದಿರುವ ಮಾಸ್ತಿಕಟ್ಟೆ ಅಂಗನವಾಡಿ ಕೇಂದ್ರದ ಶಿಕ್ಷಕಿ ಹಿಲ್ಡಾ ಮಿನೇಜಸ್ ಅವರಿಗೆ ಸ್ತ್ರೀಶಕ್ತಿ ಸ್ವ-ಸಹಾಯ ಸಂಘ, ಬಾಲ ವಿಕಾಸ ಸಮಿತಿ, ಮಕ್ಕಳ ಪೋಷಕರು ಹಾಗೂ ಊರವರ ಸಹಕಾರದೊಂದಿಗೆ ಬೀಳ್ಕೊಡುಗೆ ಸಮಾರಂಭವು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಹೊಸಬೆಟ್ಟು ಗ್ರಾ.ಪಂ ಅಧ್ಯಕ್ಷ ಮನೋಜ್ ಆಲ್ವಾರೀಸ್ ಅಧ್ಯಕ್ಷತೆಯನ್ನು ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷೆ ಮೀನಾಕ್ಷಿ, ಸದಸ್ಯ ಚಂದ್ರಹಾಸ ಸನಿಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾರ್ಷಲ್ ಡಿ”ಸೋಜಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಮೇಲ್ವೀಚಾರಕಿ ಕಾತ್ಯಾಯಿನಿ, ಬಾಲವಿಕಾಸ ಸಮಿತಿ ಸದಸ್ಯ ತುಕಾರಾಮ್, ಹಿಲ್ಡಾ ಅವರ ಪತಿ ವಿನ್ಸೆಂಟ್ ಪಾವ್ಲ್ ಮಿನೇಜಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶೋಭಾ ಸ್ವಾಗತಿಸಿದರು. ರೂಪಾ ಸನ್ಮಾನ ಪತ್ರ ವಾಚಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಜಯಂತಿ ವಂದಿಸಿದರು.