Published On: Fri, Jul 13th, 2018

ಬಸ್ ತಂಗುದಾಣಕ್ಕೆ ಢಿಕ್ಕಿಯಾದ ಕಾರು

ಬಂಟ್ವಾಳ : ನಿಯಂತ್ರಣದ ಕಾರೊಂದು ಬಸ್ ತಂಗುದಾಣಕ್ಕೆ ಢಿಕ್ಕಿಯಾದ ಪರಿಣಾಮ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.ಗಾಯಗೊಂಡವರು ಇಲ್ಲಿನ ಸಮೀಪದ ಮಾರಿಪಳ್ಳ ನಿವಾಸಿಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.13 btl talapady

13 btl talapady 1

ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ರಾ.ಹೆದ್ದಾರಿಯ ತಲಪಾಡಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಬಸ್ ತಂಗುದಾಣಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಕಾರು ಪಲ್ಟಿಯಾಗಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ನೂತನ ಬಸ್ ತಂಗುದಾಣವು ಭಾಗಶಃ ಹಾನಿಯಾಗಿದೆ. ರಾ.ಹೆದ್ದಾರಿಯಲ್ಲಿ ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು.13 btl talapady 2

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter