Published On: Wed, Aug 8th, 2018

ಸ್ವಚ್ಛ ಸವೇಕ್ಷಣ ಗ್ರಾಮೀಣ – 2018

ಮಂಗಳೂರು: ಕಂದಾವರ ಗ್ರಾಮ ಪಂಚಾಯತ್ ಹಾಗು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಇದರ ಸಹಯೋಗದೊಂದಿಗೆ ಸ್ವಚ್ಛ ಭಾರತ್ ಮಿಷನ್ ಗ್ರಾಮದ ಅಡಿಯಲ್ಲಿ ಸ್ವಚ್ಛ ಸವೇಕ್ಷಣ ಗ್ರಾಮೀಣ – 2018 ರ ಕಾರ್ಯಕ್ರಮವು ಕಂದವಾರ ಗ್ರಾಮ ಪಂಚಾಯತ್ ನಲ್ಲಿ ಆ.3 ಶುಕ್ರವಾರದಂದು ಕಂದಾವರ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.

swachha sarvekshana grameena (1)

swachha sarvekshana grameena (3)

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯ ಗೋಪಾಲ ಸುವರ್ಣ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ.ರೋಹಿಣಿ ಬಿ ಯವರು ಸ್ವಾಗತಿಸಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

swachha sarvekshana grameena (2)

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು , ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ದಿಶಾ ಟ್ರಸ್ಟ್ನ ಕಾರ್ಯಕರ್ತರು, ಹೋಟೆಲ್ ಮಾಲಿಕರು, ವಸತಿ ಸಂಕೀರ್ಣ ಮಾಲಿಕರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿಯರು, ರಿಕ್ಷಾ ಚಾಲಕ ಸಂಘದ ಅಧ್ಯಕ್ಷರು ಹಾಗು ಗ್ರಾಮಸ್ಥರು ಹಾಜರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter