Published On: Sat, Aug 11th, 2018

ಪಡುಕೊಣಾಜೆ ಶಾಲೆಯಲ್ಲಿ ಆಟಿಡೊಂಜಿ ದಿನ

ಮೂಡುಬಿದಿರೆ: ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ ಪಡುಕೊಣಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಶನಿವಾರ ನಡೆಯಿತು.
ಎಸ್.ಡಿ.ಎಂ.ಸಿ. ಅಧ್ಯಕ್ಷ ದಿನೇಶ್ ಜೆ.ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಶಿರ್ತಾಡಿ ಗ್ರಾ.ಪಂ. ಅಧ್ಯಕ್ಷೆ ಲತಾ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಆಟಿ ತುಳುನಾಡಿನ ಹಬ್ಬ. ಇದು ಜಾನಪದ, ಧಾರ್ಮಿಕ ಮತ್ತು ಆರೋಗ್ಯದ ಬಗ್ಗೆ ನಮ್ಮ ಪೂರ್ವಜರು ಆಚರಿಸಿಕೊಂಡು ಬಂದ ಸಂಸ್ಕಾರ ಎಂದು ಹೇಳಿದರು.
ಶಿರ್ತಾಡಿ ಗ್ರಾ.ಪಂ. ಸದಸ್ಯರಾದ ಶೋಭಾ ಮತ್ತು ಸಂತೋಷ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ವಿದ್ಯಾರ್ಥಿಗಳ ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಹಗ್ಗಜಗ್ಗಾಟ, ಸಂಗೀತ ಕುರ್ಚಿ, ಚೆನ್ನೆಮಣೆ ಮೊದಲಾದ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೊಂಡರು.
ವಿದ್ಯಾರ್ಥಿಗಳ ಪೋಷಕರು ತಯಾರಿಸಿದ ಆಟಿಯ ವಿವಿಧ ಬಗೆಯ ಖಾದ್ಯಗಳನ್ನು ಕಾರ್ಯಕ್ರಮದಲ್ಲಿ ಎಲ್ಲರೂ ಸವಿದರು.
ಪ್ರಭಾರ ಮುಖ್ಯೋಪಾಧ್ಯಾಯ ಮಹಾವೀರ ಜೆ. ಸ್ವಾಗತಿಸಿದರು. ಸಹಶಿಕ್ಷಕಿ ಚಂದ್ರಿಕಾ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter