Published On: Sat, Aug 11th, 2018

ಆಳ್ವಾಸ್ ಸ್ವಾತಂತ್ರ್ಯೋತ್ಸವದಂದು ಶತಾಯಿಷಿ ಸಂಭ್ರಮ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶಿಕ್ಷಣ ಸಂಸ್ಥೆಗಳ 25 ಸಾವಿರ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಅ15ರಂದು ಬೆಳಿಗ್ಗೆ 9.30ಕ್ಕೆ ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗ ಮಂಟಪದಲ್ಲಿ ನಡೆಯಲಿದೆ.

Anand Alva
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ನಿಟ್ಟೆ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಎನ್.ವಿನಯ ಹೆಗ್ಡೆ, ಶಾಸಕ ಉಮಾನಾಥ ಎ. ಕೋಟ್ಯಾನ್,ಮಾಜಿ ಸಚಿವರುಗಳಾದ ಕೆ. ಅಭಯಚಂದ್ರ ಜೈನ್, ಕೆ. ಅಮರನಾಥ ಶೆಟ್ಟಿಯವರ ಗೌರವ ಉಪಸ್ಥಿತಲಿರುವರು.

ಇದೇ ಸಂದರ್ಭದಲ್ಲಿ ಡಾ.ಎಂ. ಮೋಹನ ಆಳ್ವರ ತಂದೆ ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಶತ ಸಂಭ್ರಮ ಉದ್ಘಾಟನೆ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಅಂದು ಬೆಳಿಗ್ಗೆ 11ರಿಂದ 12.30ರವರೆಗೆ ನಡೆಯಲಿದೆ.
ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶತ ಸಂಭ್ರಮ ಉದ್ಘಾಟಿಸಿ ಶುಭಾಶೀರ್ವಾದದ ನುಡಿಗಳನ್ನಾಡಲಿದ್ದಾರೆ. ನಿಟ್ಟೆ ಸಮೂಹ ಸಂಸ್ಥೆಯ ಅಧ್ಯಕ್ಷ ಡಾ. ಎನ್.ವಿನಯ ಹೆಗ್ಡೆ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಶತ ಸಂಭ್ರಮದ ಮೊದಲ ಸಾಂಸ್ಕøತಿಕ ಕಾರ್ಯಕ್ರಮ ಕೊಲ್ಹಾಪುರ ಸ್ವರ ನಿನಾದ್ ಬಳಗದ ಜಾಗೋ ಹಿಂದೂಸ್ಥಾನಿ ಅಪರಾಹ್ನ 3 ಮತ್ತು ರಾತ್ರಿ 7.30ಕ್ಕೆ ನಡೆಯಲಿದೆ ಎಂದು ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter