ಮೈಸೂರು ದಸರಾ: ಡಾ.ಸುಧಾಮೂರ್ತಿ ಉದ್ಘಾಟನೆ
ಮೈಸೂರು: ಈ ವರ್ಷದ ವಿಶ್ವವಿಖ್ಯಾತ ಮೈಸೂರು ದಸರಯನ್ನು ಇನ್ಫೋಸಿಸ್ ಫೌಂಡೇಶನ್‍ನ ಡಾ.ಸುಧಾಮೂರ್ತಿ ಅವರು ಉದ್ಘಾಟಿಸಲಿದ್ದಾರೆ. ದಸರಾ ಆಚರಣೆಯ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಮೈಸೂರಿನಲ್ಲಿ ಸಚಿವರು, ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದರು.
ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ಬಾರಿ ಕೊಡಗಿನಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಮಾದರಿಯಲ್ಲಿ ದಸರಾ ಆಚರಣೆ ಮಾಡಲಾಗುವುದು. ಎಂದಿನಂತೆ ಎಲ್ಲ ಕಾರ್ಯಕ್ರಮಗಳನ್ನೂ ಆಯೋಜನೆ ಮಾಡಲಾಗುವುದು. ಈ ಸಾಂಪ್ರದಾಯಿಕ ದಸರಾವನ್ನು ಇನ್ಫೋಸಿಸ್ ಫೌಂಡೇಶನ್ ಡಾ.ಸುಧಾ ಮೂರ್ತಿ ಅವರು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.