ಸೆ.23ರಂದು ರೋಟರಿಕ್ಲಬ್ ಬಂಟ್ವಾಳ ಹಾಗೂ ವೃತ್ತಿ ಮಾರ್ಗದರ್ಶನ
ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಹಾಗೂ ವೃತ್ತಿ ಮಾರ್ಗದರ್ಶನ ಕೋಶ ಸರಕಾರಿ ಪ್ರಥಮದರ್ಜೆ ಕಾಲೇಜು ಬಂಟ್ವಾಳದ ಆಶ್ರಯದಲ್ಲಿ ಬ್ಯಾಂಕಿಂಗ್ ಪರೀಕ್ಷೆ ತರಬೇತಿ ಕಾರ್ಯಗಾರ ಸೆ.23ರಂದು ಭಾನುವಾರ ಅಪರಾಹ್ನ 2 ರಿಂದ 5 ಗಂಟೆಯವರೆಗೆ ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ನಡೆಯಲಿದೆ.
ಕಳೆದ 30 ವರ್ಷಗಳಿಂದ ಈ ಕ್ಷೇತ್ರದಲ್ಲಿ ಪರಿಣತಿ ಹೊಂದಿರುವ, ಕಾರ್ಪೋರೇಷನ್ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ವ್ಯವಸ್ಥಾಪಕರಾಗಿರುವ ಆರ್.ಕೆ.ಬಾಲಚಂದ್ರ ಇವರು ಪರೀಕ್ಷಾ ಪೂರ್ವ ಉಚಿತ ತರಬೇತಿ ಕಾರ್ಯಗಾರವನ್ನು ನಡೆಸಿಕೊಡಲಿದ್ದಾರೆ. ಈ ಬಾರಿಯ ಪರೀಕ್ಷಾ ವಿಧಾನದಲ್ಲಿ ಬದಲಾವಣೆಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಪರೀಕ್ಷಾ ಸಿದ್ದತೆಯ ಬಗ್ಗೆ ತರಬೇತಿ ನೀಡಲಿದ್ದಾರೆ.
ಈಗಾಗಲೇ ಐಬಿಪಿಎಸ್ ಮುಖಾಂತರ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಭಾಗದ ಯುವ ಜನತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗವಕಾಶವನ್ನು ಪಡೆಯಲುಸಹಕರಿಸುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದ್ದು ಮೊದಲು ಹೆಸರು ನೋಮದಾಯಿಸುವ 100 ಜನರಿಗೆ ಮಾತ್ರ ಅವಕಾಶವಿರುತ್ತದೆ. ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು 9845669640ವನ್ನು ಸಂಪರ್ಕಿಸುವಂತೆ ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.