Published On: Fri, Nov 2nd, 2018

ಅಳಿಯೂರು ಪ್ರೌಢಶಾಲೆಯಲ್ಲಿ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಸಹಯೋಗದಲ್ಲಿ ಅಳಿಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎರಡು ದಿನ ನಡೆಯುವ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

State level Ball Badminton
ಕರ್ನಾಟಕ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ನಿರ್ಧಿಷ್ಟ ಗುರಿ ಹಾಗೂ ನಿರಂತರ ಪರಿಶ್ರಮದಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದು.ಮೂಡುಬಿದಿರೆ ತಾಲ್ಲೂಕಿನಲ್ಲೆ ಗರಿಷ್ಟ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಹೈಸ್ಕೂಲ್ ಎಂಬ ಹೆಗ್ಗಳಿಕೆ ಇರುವ ಅಳಿಯೂರು ಪ್ರೌಢಶಾಲೆಗೆ ಪದವಿ ಪೂರ್ವ ಕಾಲೇಜಿನ ಬೇಡಿಕೆಯಿದ್ದು ನಾನು ಹಾಗೂ ಶಾಸಕರು ಮುಖ್ಯಮಂತ್ರಿಯನ್ನು ಭೇಟಿಯಾಗಿ ಒತ್ತಡ ಹೇರುವುದಾಗಿ ತಿಳಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಅಳಿಯೂರು ಸರ್ಕಾರಿ ಹೈಸ್ಕೂಲ್‍ನಲ್ಲಿ ರಾಜ್ಯಮಟ್ಟದ ಬಾಲ್‍ಬ್ಯಾಡ್ಮಿಂಟನ್ ಪಂದ್ಯಾಟ ನಡೆಸಲು ಸಾಧ್ಯವಾದದ್ದು ಊರವರು, ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರ ಸಹಕಾರ ಕಾರಣ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಮರನಾಥ ಶೆಟ್ಟಿ, ದ.ಕ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯಿತಿ ಸದಸ್ಯೆ ಸುಜಾತಾ, ವಾಲ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ, ತಾಲೂಕು ಪಂಚಾಯಿತಿ ಸದಸ್ಯ ನಾಗವೇಣಿ, ಮಜಲೋಡಿಗುತ್ತು ಪ್ರಕಾಶ್ ಶೆಟ್ಟಿ, ಎಸ್‍ಡಿಎಂಸಿ ಕಾರ್ಯಾಧ್ಯಕ್ಷ ವಿಶ್ವನಾಥ ಸಾಲ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಅಳಿಯೂರು, ಮುಖ್ಯ ಶಿಕ್ಷಕಿ ರೋಸಾ ವಿ.ಜೆ, ದೈಹಿಕ ಶಿಕ್ಷಣ ಶಿಕ್ಷಕ ವಸಂತ ಜೋಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಶಿರೂರು, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ª ಉಪಸ್ಥಿತರಿದ್ದರು.
ಕಾರ್ಯಕ್ರಮದವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈಶಿವರಾಮಯ್ಯ ಸ್ವಾಗತಿಸಿದರು. ನವೀನ್ ಅಂಬೂರಿ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ವಂದಿಸಿದರು.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter