Published On: Sat, Nov 24th, 2018

ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಯಿಂದ ಒಗ್ಗಟ್ಟು ಸಾಧ್ಯ- ಡಾ| ವೈ ಭರತ್ ಶೆಟ್ಟಿ

ಬಜಪೆ: ಇತ್ತೀಚಿನ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸುತ್ತಿದ್ದು, ಮರೆಯಾಗುತ್ತಿರುವ ಗ್ರಾಮೀಣ ಆಟಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುತ್ತಿರುವ ಕೆಲಸ ಉತ್ತಮ ವಿಷಯವಾಗಿದೆ. ಗ್ರಾಮೀಣ ಕ್ರೀಡೆಗಳಿಂದ ಒಗ್ಗಟ್ಟು ಮೂಡುತ್ತದೆ ಎಂದು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ! ವೈ ಭರತ್ ಶೆಟ್ಟಿಯವರು ಹೇಳಿದರು.

ಕೊಳಂಬೆಯ ದ.ಕ.ಜಿ.ಪಂ. ಕಿ.ಪ್ರಾಥಮಿಕ ಶಾಲೆಯ ಆವರಣದಲ್ಲಿ ನ.18 ಭಾನುವಾರ ಬಜಪೆಯ ಕೊಳಂಬೆಯಲ್ಲಿ ಹಳೇ ವಿದ್ಯಾರ್ಥಿ ಸಂಘ (ರಿ) ಆಯೋಜಿಸಿದ ಹಳ್ಳಿ ಕ್ರೀಡೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

grameena kreede

ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಆಯೋಜಿಸಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲಾ ಗ್ರಾಮಾಂತರ ಪ್ರದೇಶಗಳ ಯುವಜನತೆ ಮುಂದಾಗಬೇಕಿದೆ ಎಂದರು.

ಹಳೇ ವಿದ್ಯಾರ್ಥಿ ಸಂಘದ ಸಂಯೋಜಕರಾದ ರೂಪೇಶ್ ಕುಮಾರ್ ಅದ್ಯಪಾಡಿರವರು ಮಾತನಾಡಿ,, ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು, ಕೊಳಂಬೆಯಂತಹ ಗ್ರಾಮೀಣ ಪ್ರದೇಶದಲ್ಲಿ ಹಿರಿ ಕಿರಿಯ ಸಾಧಕರನ್ನು ಗುರುತಿಸಿ, ಗೌರವಿಸಿದ್ದು ಅಭಿನಂದನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆ.ಕೆ.ರೈ. ಎರ್ಮಜಲ್ ಗುತ್ತು ನಂದನ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೇಶವ ಭಂಢಾರಿ, ಶಾಲಾ ಮುಖ್ಯೋಪಾಧ್ಯಾಯರಾದ ಎಲ್ ಫ್ರೀಡಾ ಡಿ’ ಸೋಜಾ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರವೀಂದ್ರ ಕುಲಾಲ್ ಸ್ವಾಗತಿಸಿದರು. ಕು. ವೈಷ್ಣವಿ ಭಟ್ ಪ್ರಾರ್ಥಿಸಿದರು. ಚಂದಪ್ಪ ಕೊಳಂಬೆರವರು ವಂದಿಸಿದರು.. ವಿ ಜೆ. ಮಧುರಾಜ್ ಕಾರ್ಯಕ್ರಮ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter