ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ನ ಭವಿಷ್ಯ ಪೂಜಾರಿಗೆ ಬೆಳ್ಳಿ ಪದಕ
ಮೂಡುಬಿದಿರೆ: ಆಂಧ್ರಪ್ರದೇಶದ ಆಚಾರ್ಯ ನಾಗಾರ್ಜುನ ವಿ.ವಿ. ಗುಂಟೂರು ಇಲ್ಲಿ ಗುರುವಾರ ನ.29 ರಂದು ಜರುಗಿದ ಅಖಿಲ ಭಾರತ ಅಂತರ್ ವಿ.ವಿ. ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ಭವಿಷ್ಯ ಪೂಜಾರಿ ಬೆಳ್ಳಿ ಪದಕ ಪಡೆದಿದ್ದಾರೆ.
ಆಳ್ವಾಸ್ ಕಾಲೇಜಿನ ದ್ವಿತೀಯ ಬಿ.ಎ. ವಿದ್ಯಾರ್ಥಿನಿಯಾಗಿರುವ ಈಕೆ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ್ದರು.
ಮಂಗಳೂರು ತಾಲೂಕು ಮೂಡುಶೆಡ್ಡೆ ಶಿವನಗರದ ಪ್ರೇಮಾ ಮತ್ತು ನವೀನ್ ಪೂಜಾರಿ ದಂಪತಿಯ ಸುಪುತ್ರಿ ಭವಿಷ್ಯ ಪೂಜಾರಿ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಉಚಿತ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದಾರೆ.
ಡಿಸೆಂಬರ್ 14 ರಿಂದ ನಾಗ್ಪುರದಲ್ಲಿ ಜರುಗಲಿರುವ ರಾಷ್ಟ್ರೀಯ ಜೂನಿಯರ್ ಭಾರ ಎತ್ತುವ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.