ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವೀಕ್ಷಕರಾಗಿ ಎಫ್. ಉಮ್ಮರ್ ಫಾರೂಕ್ ಫರಂಗಿಪೇಟೆ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಗೆ ವೀಕ್ಷಕರನ್ನಾಗಿ ಎಫ್ ಉಮ್ಮರ್ ಫಾರೂಕ್ ಫರಂಗಿಪೇಟೆಯವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ನೀಡಲಾಗಿದೆ.
ಈಗಾಗಲೇ ವೀಕ್ಷಕನಾಗಿ ಮಾಡಿದ ತಮಗೆ ವಹಿಸಲಾಗಿರುವ ಈ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಹಿರಿಯ ನಾಯಕರ ಮಾರ್ಗದರ್ಶನ ಮತ್ತು ಸ್ಥಳೀಯ ಮುಖಂಡರ ಸಹಕಾರದೊಂದಿಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳೊಂದಿಗೆ ಸಹಕರಿಸಿಕೊಂಡು ಕಾರ್ಯನಿರ್ವಾಹಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.