Published On: Fri, Dec 7th, 2018

ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಆರ್‍ಟಿಇ ಕಾಯ್ದೆಗೆ ತಿದ್ದುಪಡಿ

ಬಂಟ್ವಾಳ: ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಭೀತಿಯಲ್ಲಿದ್ದ ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಆರ್‍ಟಿಇ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಸರಕಾರದ ಕ್ರಮವನ್ನು ಸರಕಾರಿ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಸ್ವಾಗತಿಸಿದೆ.

BTW_DCE7_1ರಾಜ್ಯದಲ್ಲಿ ಹಲವು ಸರಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಲು ಆರ್‍ಟಿಐ ಕಾಯ್ದೆಯಡಿ ವಿದ್ಯಾರ್ಥಿಗಳು ಖಾಸಗಿ ಶಾಲೆಗಳನ್ನು ಸೇರುತ್ತಿದ್ದ ಪ್ರಕ್ರಿಯೆಯೂ ಒಂದು ಕಾರಣವಾಗಿತ್ತು. ಇದೀಗ ಕೇರಳ ಮಾದರಿಯಲ್ಲಿ ಸರಕಾರಿ ಶಾಲೆ ಇರುವ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಆರ್‍ಟಿಯಡಿ ಖಾಸಗಿ ಶಾಲೆಗಳಿಗೆ ಸೇರುವಂತಿಲ್ಲ, ಬದಲಾಗಿ ಸರಕಾರಿ ಶಾಲೆಯಲ್ಲಿಯೇ ಕಲಿಕೆ ಮುಂದುವರೆಸಬೇಕು ಎನ್ನುವ ರಾಜ್ಯ ಸರಕಾರದ ಮಹತ್ವದ ನಿರ್ಧಾರ ಅಭಿನಂದನೀಯ ಹಾಗೂ ಸರಕಾರಿ ಶಾಲೆ ಉಳಿಸುವ ನಮ್ಮ ಹೋರಾಟಕ್ಕೆ ಸಿಕ್ಕ ಜಯ ಎಂದು ಸಮಿತಿಯ ರಾಜಾಧ್ಯಕ್ಷ ಪ್ರಕಾಶ್ ಅಂಚನ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸರಕಾರಿ ಶಾಲೆಗೆ ಬರುತ್ತಿದ್ದ ವಿದ್ಯಾರ್ಥಿಗಳು ಆರ್‍ಟಿಇ ಕಾಯ್ದೆಯಿಂದಾಗಿ ಖಾಸಗಿ ಶಾಲೆಗಳನ್ನು ಸೇರುವ ಅವಕಾಶವನ್ನು ಸರಕಾರವೇ ಕಲ್ಪಿಸಿತ್ತು. ಇದು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಗೆ ಪ್ರಮುಖ ಕಾರಣವಾಗಿತ್ತು. ಸರಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಭಾಷಾ ಕಲಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದ ಸರಕಾರ, ಆರ್‍ಟಿಇ ಮೂಲಕ ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮಕ್ಕಳನ್ನು ದಾಖಲಿಸಿ ಸರಕಾರದ ಬೊಕ್ಕಸದ ಹಣವನ್ನು ಸುರಿದು ಅಲ್ಲಿ ಆಂಗ್ಲ ಭಾಷೆಯಲ್ಲಿ ಕಲಿಗೆಗೆ ಪ್ರೋತ್ಸಾಹ ನೀಡುತ್ತಿತ್ತು. ಇದರಿಂದಾಗಿ ಕೆಲ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯಲ್ಲಿ ಓದುವ ಅವಕಾಶ ಸಿಕ್ಕರೆ ಹಲವಾರು ವಿದ್ಯಾರ್ಥಿಗಳು ಇದರಿಂದಾಗಿ ವಂಚಿತರಾಗುತ್ತಿದ್ದರು. ಪ್ರತೀ ವರ್ಷ ಸರಕಾರ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿ ಖಾಸಗಿ ಶಾಲೆಗಳನ್ನು ಪರೋಕ್ಷವಾಗಿ ಪ್ರೋತ್ಸಾಹ ಮಾಡುತ್ತಿತ್ತು.

 

ಇದರ ಬದಲು ಆ ಬೃಹತ್ ಮೊತ್ತವನ್ನು ಸರಕಾರಿ ಶಾಲೆಗಳ ಸಬಲೀಕರಣಕ್ಕೆ ಉಪಯೋಗಿಸಿದರೆ, ಖಾಸಗಿ ಶಾಲೆಗಳಲ್ಲಿ ಸಿಗುವ ಶಿಕ್ಷಣವನ್ನು ಸರಕಾರಿ ಶಾಲೆಯಲ್ಲಿಯೇ ನೀಡಿದರೆ ಸರಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಿದೆ ಎನ್ನುವುದನ್ನು ಎರಡು ವರ್ಷಗಳ ಹಿಂದಿನಿಂದಲೇ ಸರಕಾರಿ ಶಾಲೆ ಉಳಿಸಿ ಹೋರಾಟ ಸಂದರ್ಭದಲ್ಲಿ ನಾವು ಶಿಕ್ಷಣ ಸಚಿವರು, ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತಾ ಬಂದಿದ್ದೇವೆ. ಕೊನೆಗೂ ಎಚ್ಚೆತ್ತುಕೊಂಡಿರುವ ಸರಕಾರ ಇದೀಗ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ಇದರೊಂದಿಗೆ ಸ್ಪರ್ಧಾತ್ಮಕ ಕಾಲಘಟ್ಟಕ್ಕೆ ತಕ್ಕಂತೆ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಒಂದನೇ ತರಗತಿಯಿಂದಲೇ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ಕಲಿಕೆಗೂ ಅವಕಾಶ ನೀಡುವ ಇಚ್ಛಾಶಕ್ತಿಯನ್ನು ಸರಕಾರ ಪ್ರದರ್ಶಿಸಿದರೆ ಮುಂದಿನ ದಿನಗಳಲ್ಲಿ ಎಲ್ಲಾ ಸರಕಾರಿ ಶಾಲೆಗಳು ಉಳಿಯಲಿದೆ, ಹೊಸ ಬಲ ಪಡೆದುಕೊಂಡು ಮುಚ್ಚುವ ಭೀತಿಯಿಂದ ಮುಕ್ತಗೊಳ್ಳಲಿದೆ, ಸರಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಸರಕಾರದ ಈ ಪ್ರಯತ್ನಕ್ಕೆ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಸಂಪೂರ್ಣ ಬೆಂಬಲ ಇದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter