ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ
ಮಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿರುವುದನ್ನು ಬಂಟ್ವಾಳ ಕಾಂಗ್ರೇಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ತೀವ್ರವಾಗಿ ವಿರೋಧಿಸುತ್ತದೆ.
ಶುದ್ಧ ಹಸ್ತ, ಪ್ರಾಮಾಣಿಕ, ಸರಳ ವ್ಯಕ್ತಿತ್ವದ ಜನಾರ್ಧನ ಪೂಜಾರಿಯವರನ್ನು ಅವಾಚ್ಯವಾಗಿ ನಿಂದಿಸಿರುವುದು ವಿಷಾದಕರ. ಹಾಗೂ ಈ ಘಟನೆಯು ಅವರಿಗೆ ಮಾನಸಿಕ ಹಿಂಸೆ ನೀಡಿದ ವ್ಯಕ್ತಿಯ ವಿರುದ್ಧ ಪೋಲಿಸರು ಸೈಬರ್ ಕ್ರೈಮ್ ಕಾಯ್ದೆಯಡಿ ಸೂಕ್ತ ಕ್ರಮಕೈಗೊಂಡು ಆರೋಪಿಗಳನ್ನು ಬಂಧಿಸಲು ಆಗ್ರಹಿಸಲಾಗಿದೆ. ಅಂತೆಯೇ ಕಾಂಗ್ರೇಸ್ ಪಕ್ಷದ ಮುಖಂಡರ ಬಗ್ಗೆ ಬಿಜೆಪಿಯ ಯಾವುದೇ ಸ್ವಯಂ ಘೋಷಿತ ಮುಖಂಡರು ಮಾತನಾಡುವ ಅವಶ್ಯಕತೆಯಿಲ್ಲ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.