Published On: Sat, Feb 9th, 2019

ಜೇಸಿ ವತಿಯಿಂದ ಅಧ್ಯಯನ ತಂತ್ರ ಮತ್ತು ಪರೀಕ್ಷಾ ಸಿದ್ಧತೆ ಬಗ್ಗೆ ತರಬೇತಿ ಕಾರ್ಯಕ್ರಮ

ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ “ಅಧ್ಯಯನ ತಂತ್ರ ಮತ್ತು ಪರೀಕ್ಷಾ ಸಿದ್ಧತೆ” ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ನಡೆಸಲಾಯಿತು.IMG-20190209-WA0111

ಪರೀಕ್ಷೆಯನ್ನು ಎದುರಿಸಲು ಬೇಕಾಗುವ ಮನಸ್ಸಿನ ಏಕಾಗ್ರತೆ ಮತ್ತು ಜ್ಞಾಪಕ ಶಕ್ತಿಯನ್ನು ವೃದ್ಧಿಸಲು ಯಾವ ರೀತಿ ಮಕ್ಕಳು ತಯಾರಿ ನಡೆಸಬೇಕು ಹಾಗೂ ಇದಕ್ಕೆ ಪೂರಕವಾದ ವಾತಾವರಣವನ್ನು ಪೋಷಕರು ಮನೆಯಲ್ಲಿ ಮತ್ತು ಶಿಕ್ಷಕರು ಶಾಲೆಯಲ್ಲಿ ಯಾವ ರೀತಿ ನಿರ್ಮಾಣ ಮಾಡಬೇಕು ಎಂಬ ವಿಷಯದ ಬಗ್ಗೆ ತರಬೇತಿಯನ್ನು  ಜೇಸಿ ವೃಷಭ್ ರಾಜ್ ಜೈನ್, ರಾಜ್ಯ ತರಬೇತುದಾರರು,  ಹಲವಾರು ಉದಾಹರಣೆಗಳು ಮತ್ತು ಪ್ರಾತ್ಯಕ್ಷಿಕೆಯ ಮೂಲಕ ತಿಳಿಸಿಕೊಟ್ಟರು.IMG_20190209_145528_1

 IMG-20190209-WA0102ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷರಾದ ಜೇಸಿ ಹರ್ಷರಾಜ್ ಸಿ. ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಉಪನಿರ್ದೇಶಕರಾಗಿರುವ ಶ್ರೀ ಶಿವರಾಮಯ್ಯ, ಶಾಲೆಯ ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.  ಜೇಸಿರೆಟ್ ಅಧ್ಯಕ್ಷೆ ಜೇಸಿ ಅಮಿತಾ ಹರ್ಷರಾಜ್, ಜೇಸಿಐ ಜೋಡುಮಾರ್ಗ ನೇತ್ರಾವತಿಯ ಉಪಾಧ್ಯಕ್ಷರುಗಳಾದ ಜೇಸಿ ಹರಿಪ್ರಸಾದ್ ಕುಲಾಲ್, ಜೇಸಿ.ಜಯರಾಜ್ ಎಸ್. ಬಂಗೇರ, ಜೇಸಿ ಗಾಯತ್ರಿ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜೇಜೇಸಿ ಅಧ್ಯಕ್ಷ ರೋನಿತ್ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter