Published On: Mon, Feb 11th, 2019

ಸಿದ್ದಕಟ್ಟೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ತರಬೇತಿ

ಬಂಟ್ವಾಳ:  ಸಿದ್ದಕಟ್ಟೆ  ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ, ಉದ್ಯೋಗ ಭರವಸೆ ಕೋಶ ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸ್ಪರ್ಧಾತ್ಮಕ ಪರೀಕಾ ತರಬೇತಿ ನಡೆಯಿತು.
IMG_20190211_103333
 ಬಂಟ್ವಾಳ ತಹಶಿಲ್ದಾರರಾದ  ರಶ್ಮಿ ಹೆಚ್.ಆರ್  ಸಂಪನ್ಮೂಲ ವ್ಯಕಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿ ಜೀವನ ಜೀವನದ ಸುಮಧುರ ಕ್ಷಣವಾಗಿದ್ದು ಅದನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳಬೇಕು. ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಪೂರಕವಾದ ವಾತಾವರಣವನ್ನು ಸೃಷ್ಟಿಸಿಕೊಂಡು ತಮ್ಮ ಅಂತಶಕ್ತಿಗೆ ಅನುಗುಣವಾದ ಉದ್ಯೋಗ ಕ್ಷೇತ್ರವನ್ನು ಆಯ್ದುಕೊಳ್ಳಬೇಕು ಎಂದರು. ಐಎಎಸ್ ,ಕೆ ಎಎಸ್  ಸ್ಪರ್ಧಾತ್ಮಕ ಪರೀಕ್ಷೆಗಳ ಸ್ವರೂಪದ ಕುರಿತು ಮಾತನಾಡಿದ ಅವರು ಕಠಿಣ ಪರಿಶ್ರಮ ಹಾಗೂ ಪ್ರಾಮಾಣಿಕ ಪ್ರಯತ್ನ ಈ ಪರೀಕ್ಷೆಗಳಲ್ಲಿ ಯಶಸ್ಸು ತಂದುಕೊಡಬಲ್ಲದು ಎಂದರು.ಅತಿಥಿಯಾಗಿ ಆಗಮಿಸಿದ ತಾಪಂ ಸದಸ್ಯ   ಪ್ರಭಾಕರ ಪ್ರಭು ಮಾತನಾಡಿ , ಹಿನ್ನಡೆ ಅಥವಾ ಸೋಲಿಗೆ ಚಿಂತಿಸದೆ ನಿರಂತರ ಪ್ರಯತ್ನ ಮಾಡಿದರೆ ಸಾಧನೆ ಸಾಧ್ಯ.  ಸ್ಪರ್ಧಾತ್ಮಕ ಪರೀಕ್ಷೆಗಳಂತ ಅವಕಾಶಗಳನ್ನು ವಿದ್ಯಾರ್ಥಿಗಳು ಸಮಾಜಸೇವೆಗಾಗಿ ಒಂದು ವೇದಿಕೆಯನ್ನಾಗಿ ಬಳಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿಯೆ ಜಾಗೃತರಾಗಿ ಸಿದ್ಧತೆಗಳನ್ನು ಆರಂಭಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್ ಮಾತನಾಡಿ ವಿದ್ಯಾರ್ಥಿಗಳಿಗೆ ಹಲವಾರು ವಿಚಾರಗಳ ಕುರಿತು ಸೂಕ್ತ ಮಾರ್ಗದರ್ಶನವನ್ನು ನೀಡಲು ಕಾಲೇಜು ಬಹಳಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.  ಕಾಲೇಜಿನ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಹನುಮಂತಯ್ಯ ಜಿ.ಹೆಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ   ಶ್ವೇತಾ   ನಿರ್ವಹಿಸಿದರು. ಸ್ವಾತಿ ಸ್ವಾಗತಿಸಿದರುು. , ದೀಕ್ಷಿತಾ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter