Published On: Wed, Feb 13th, 2019

ಎಸ್ ವಿ ಎಸ್ ಕಾಲೇಜಿನಲ್ಲಿ ಉಪನ್ಯಾಸ

ಬಂಟ್ವಾಳ:  ವಿದ್ಯಾರ್ಥಿಗಳಲ್ಲಿ  ಪ್ರಸ್ತುತ ದಿನಗಳಲ್ಲಿ ಸಂಶೋಧನಾತ್ಮಕ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಲ್ಲಿಯೂ ತಮಗೆ ಅರಿವಿಲ್ಲದಂತೆ ಸಂಶೋಧನಾತ್ಮಕ ಗುಣಗಳು ಸುಪ್ತವಾಗಿರುತ್ತದೆ. ಇದನ್ನು ಹೊರತರುವಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಮುತುವರ್ಜಿ ವಹಿಸಿಬೇಕಾಗುತ್ತದೆ ಎಂದು ಮಂಗಳೂರು ವಿವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಡಾ. ಸಿದ್ದಾರಾಜು ಹೇಳಿದರು.DSC07098

ಬಂಟ್ವಾಳ ಎಸ್ ವಿ ಎಸ್ ಕಾಲೇಜಿನಲ್ಲಿ ಪ್ರಾಣಿಶಾಸ್ತ್ರ ವಿಭಾಗ ಹಾಗೂ ಇಂಚರ ಜಂಟಿಯಾಗಿ ಆಯೋಜಿಸಲಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಯುವಜನತೆ ಈ ಬಗ್ಗೆ ಕಾರ್ಯತತ್ಪರರಾಗಬೇಕು. ಸಾಂಪ್ರದಾಯಿಕ ಕೃಷಿ ಪದ್ದತಿಯಲ್ಲೂ ಸಂಶೋಧನಾತ್ಮಕ ಗುಣವನ್ನು ನಾವು ಗುರುತಿಸಿ ಅದರ ಮಟ್ಟವನ್ನು ಇನ್ನಷ್ಟು ಸುಧಾರಿಸಬೇಕು ಎಂದರು .

ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪಪ್ರಾಂಶುಪಾಲೆ ಡಾ| ಹೆಚ್ ಆರ್ ಸುಜಾತ ಸಂಶೋಧನೆಯ ಮಹತ್ವ ಮತ್ತು ನಮ್ಮ ದೈನಂದಿನ ಕಾರ್ಯಗಳಲ್ಲಿ ಅದರ ಉಪಯುಕ್ತತೆ ಬಗ್ಗೆ ವಿವರಿಸಿದರು. ಉಪನ್ಯಾಸ ಕಾರ್ಯಕ್ರಮದ ಸಂಯೋಜಕಿ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ  ಡಾ| ದಾಕ್ಷಾಯಿಣಿ ಉಪಸ್ತಿತರಿದ್ದರು. ಇಂಚರದ ಕಾರ್ಯದರ್ಶಿ    ಲಕ್ಷಿ ಸ್ವಾಗತಿಸಿ, ಜೊತೆ ಕಾರ್ಯದರ್ಶಿಯಾದ ಶರತ್ ಕುಮಾರ್ ವಂದಿಸಿದರು. ವಿಜ್ಞಾನ ವಿಭಾಗದ ಎಲ್ಲಾ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದರು.  ವಿದ್ಯಾರ್ಥಿನಿ ರಕ್ಷಿತಾ ರೈ ಕಾರ್ಯಕ್ರಮ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter