Published On: Wed, Mar 13th, 2019

ಸಂಸ್ಥೆಗಳಿಗೆ, ಸಾರ್ವಜನಿಕರಿಗೆ ಅಭಿನಂದನೆ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ 10ದಿನಗಳಿಂದ ನಡೆಯುತ್ತಿದ್ದ ಬ್ರಹ್ಮಕಲಶೋತ್ಸವ ಮಂಗಳವಾರ ರಾತ್ರಿ ಸಂಪ್ರೋಕ್ಷಣೆಯೊಂದಿಗೆ ಸಮಾಪಣೆಗೊಂಡಿದ್ದು, 10ದಿನಗಳ ಈ ಮಹೋತ್ಸವ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಯನ್ನು ಸಲ್ಲಿಸುತ್ತೇವೆ ಎಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

ಮಾ.4ರಿಂದ ಶ್ರೀ ಕ್ಷೇತ್ರದಲ್ಲಿ ನಡೆದ ಪುನಃಪ್ರತಿಷ್ಠೆ, ಅಷ್ಟಬಂಧ, ನೂತನ ಧ್ವಜಸ್ತಂಭ, ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಾ.13ರವರೆಗೆ ನಡೆಯಿತು. ಈ ಸಂದರ್ಭ ನಡೆದ ಎಲ್ಲ ಕಾರ್ಯಕ್ರಮಗಳು ಶ್ರೀದೇವರ ದಯೆ ಹಾಗೂ ಸರ್ವರ ಕೂಡುವಿಕೆಯಿಂದ ನಿರೀಕ್ಷೆ ಮೀರಿ ಯಶಸ್ಸು ಗಳಿಸಿದ್ದಲ್ಲದೆ ಎಲ್ಲರ ಶ್ಲಾಘನೆಗೆ ಪಾತ್ರವಾಗಿದೆ.

ಈ ಯಶಸ್ಸಿಗೆ ಸಹಕರಿಸಿದ ಸರಕಾರದ ನಾನಾ ಇಲಾಖೆಗಳಿಗೆ, ದೇವಾಲಯಗಳು ಮತ್ತು ಭಜನಾ ಮಂಡಳಿಗಳ ಆಡಳಿತ ಮಂಡಳಿಗಳಿಗೆ, ಸಂಘ-ಸಂಸ್ಥೆಗಳಿಗೆ, ದಾನಿಗಳಿಗೆ, ಸೇವಾಕರ್ತರಿಗೆ, ಕರಸೇವಕರು, ಸ್ವಯಂಸೇವಕರು, ಮಾಧ್ಯಮ ಮಿತ್ರರಿಗೆ, ಹೊರೆಕಾಣಿಕೆ ಸಮರ್ಪಣೆ ಮಾಡಿದವರಿಗೆ, ವಾಹನ ಚಾಲಕ-ಮಾಲಕರಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter