Published On: Fri, Apr 12th, 2019

ಅರ್ಕುಳ ಕ್ಷೇತ್ರದಿಂದ ಶುಕ್ರವಾರ ಪೊಳಲಿಗೆ ಶ್ರೀ ಉಳ್ಳಾಕ್ಲು ಮಗೃಂತಾಯ ದೈವಗಳ ಭಂಡಾರದ ಆಗಮನ

ಪೊಳಲಿ : ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳ ಸಾನಿಧ್ಯ ಹಾಗೂ ಶ್ರೀ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರಿ ಅಮ್ಮನವರಿಗೂ ಅವಿನಾಭಾವ ಸಂಬಂಧ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಪುನರ್ನಿರ್ಮಾಣದ ಶುಭವಸರದಲ್ಲಿ ಶ್ರೀ ಉಳ್ಳಾಕ್ಲು ಮಗೃಂತಾಯಿ ಧರ್ಮದೇವತೆಗಳ ಮಾಡ ಹಾಗೂ ಸಾಣ ಪುನರ್ನವೀಕರಣಗೊಂಡು ಬ್ರಹ್ಮಕಲಶೋತ್ಸವದ ಸಮಯ ಅರ್ಕುಳ ಬೀಡಿನಿಂದ ಶ್ರೀ ದೈವಗಳ ಭಂಡಾರವು ಶ್ರೀ ಕ್ಷೇತ್ರ ಪೊಳಲಿಗೆ ಆಗಮಿಸಿ ನೇಮ ಸೇವೆಯು ಸಂಪನ್ನಗೊಂಡಿದೆ.

12vp bhandaraagamana5

 

 

12vpbhandaraagamana (2)

 

12vpbhandaraagamana1

 

ವರ್ಷಾವಧಿ ಜಾತ್ರೆಯ ಪುಣ್ಯವಸರದಲ್ಲ್ಲಿ ಪೂರ್ವಕಟ್ಟುಕಟ್ಟಳೆಗೆ ಅನುಸಾರವಾಗಿ ಅರ್ಕುಳ ಬೀಡಿನಿಂದ ಶ್ರೀ ದೈವಗಳ ಭಂಡಾರವು ಶ್ರೀ ಕ್ಷೇತ್ರ ಪೊಳಲಿಗೆ ಎ. 12 ರಂದು ಶುಕ್ರವಾರ ಆಗಮಿಸಿತು. ಧಾರ್ಮಿಕತೆಯ ಸೊಗಡಿನೊಂದಿಗೆ ಜನಮಾನಸದಲ್ಲಿ ಶ್ರದ್ಧಾಭಕ್ತಿಯ ದಿವ್ಯ ಸಂಚಲನವನ್ನು ಮೂಡಿಸಲಿರುವ ಹಾಗೂ ತುಳುನಾಡಿನಲ್ಲಿಯೇ ಅತೀ ದೀರ್ಘವಾದ ಪರಂಪರಾನುಗತ ಶೋಭಾಯಾತ್ರೆಯೊಂದಿಗೆ ಆಗಮಿಸಿದಾಗ ಪೊಳಲಿ ದೇವಳದ ತಂತ್ರಿಗಳು, ಅರ್ಚಕರು, ಆಡಳಿತಮಂಡಳಿ, ಬರಮಾಡಿಕೊಂಡರು.

12vpbhandaraagamana1

 

 

12vpbhandaraagamana

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter