Published On: Wed, Apr 24th, 2019

ಪತ್ರಿಕೋದ್ಯಮ-ಸಮೂಹ ಸಂವಹನ ವಿಭಾಗದಲ್ಲಿ ಅಶ್ವಿನ್ ಜೈನ್‍ಗೆ ಪ್ರಥಮ Rank

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯವು 2017-18ನೇ ಸಾಲಿನ ಮೇ ತಿಂಗಳಲ್ಲಿ ನಡೆಸಿದ ಸ್ನಾತಕೋತ್ತರ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಅಶ್ವಿನಿ ಜೈನ್ ಪ್ರಥಮ Rank ಗಳಿಸುವುದರ ಜೊತೆಗೆ ಎರಡು ಚಿನ್ನದ ಪದಕ ಹಾಗೂ ಮೂರು ನಗದು ಬಹುಮಾನಕ್ಕೆ ಪುರಸ್ಕøತರಾಗಿದ್ದಾರೆ.
ಡಾ. ಟಿ.ಎಮ್.ಎ ಪೈ ಎಂಡೋವ್‍ಮೆಂಟ್ ಹಾಗೂ ರಾಮಕೃಷ್ಣ ಮಲ್ಯ ಟ್ರಸ್ಟ್‍ನಿಂದ ಚಿನ್ನದ ಪದಕಗಳು, ದಕ್ಷಿಣ ಕನ್ನಡ ಚಿಲ್ಡ್ರನ್ಸ್ ಫಿಲ್ಮ್ ಫೆಸ್ಟಿವಲ್, ಪಬ್ಲಿಕ್ ರಿಲೇಶನ್ಸ್ ಸೊಸೈಟಿ ಆಫ್ ಇಂಡಿಯಾ ಕ್ಯಾಶ್ ಪ್ರೈಜ್ ಹಾಗೂ ಎಮ್.ಸಿ.ಜೆ ಸಿಲ್ವರ್ ಜುಬ್ಲಿ ಇಯರ್ ವತಿಯಿಂದ ನಗದು ಬಹುಮಾನವನ್ನು ಪಡೆದಿದ್ದಾರೆ.

ashwini jain
ಪ್ರಸ್ತುತ ಎಸ್.ಡಿ. ಎಮ್ ಶಿಕ್ಷಣ ಸಂಸ್ಥೆಯಲ್ಲಿನ ಮಲ್ಟಿಮೀಡಿಯಾ ಸ್ಟುಡಿಯೋದಲ್ಲಿ ಕಂಟೆಂಟ್ ಡೆವಲಪರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಕಳ ನಿಟ್ಟೆ ನಿವಾಸಿ ನಂದನ್ ಕುಮಾರ್ ಹಾಗೂ ವಿಜಯಲಕ್ಷ್ಮಿ ದಂಪತಿಯ ಪುತ್ರಿಯಾಗಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್ ಹಾಗೂ ಶಿಕ್ಷಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter