Published On: Wed, Jun 12th, 2019

ವಿದ್ಯುತ್ ತಂತಿ ತುಳಿದು ತಂದೆ,ಮಗಳ ಸಾವು

ಬಂಟ್ವಾಳ,: ತೋಟದಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಾರೆಕ್ಕಿನಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ.
ಮೃತರನ್ನು ಬಾರೆಕ್ಕಿನಡಿ ನಿವಾಸಿ, ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಶೆಟ್ಟಿ (೬೫), ಇವರ ಮಗಳು ದಿವ್ಯಾಶ್ರಿ (೨೯) ಮೃತಪಟ್ಟವರು.
IMG-20190611-WA0085
ಘಟನೆ:
ಮಂಗಳವಾರ ಸಂಜೆ ಗೋಪಾಲಕೃಷ್ಣ ಶೆಟ್ಟಿ ತನ್ನ ಮಗಳೊಂದಿಗೆ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ಕಡಿದು ಬಿದ್ದಿದ್ದ ಹಳೆಯ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. ತಂದೆಯನ್ನು ಹಿಂಬಾಲಿಸಿಕೊಂಡು ಬರುತ್ತಿದ್ದ ಪುತ್ರಿ ದಿವ್ಯಾಶ್ರೀ ಅವರಿಗೂ ವಿದ್ಯುತ್ ತಂತಿ ತಗಲಿ ಈ ಅವಘಡ ಸಂಭವಿಸಿದೆ.
ಮಂಗಳವಾರ ಸಂಜೆ ಸುಮಾರು ೪ ಗಂಟೆಯ ವೇಳೆ ಘಟನೆ ಸಂಭವಿಸಿದೆ. ಇಂದು ಸಂಜೆ ಬೀಸಿದ ಗಾಳಿಗೆ ಅಡಿಕೆ ಮರದ ಸೋಗೆ ವಿದ್ಯುತ್ ತಂತಿ ಮೇಲೆ ಬಿದ್ದು, ಅದು ಕಡಿದುಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಗೋಪಾಲಕೃಷ್ಣ ಶೆಟ್ಟಿ ಅವರು ಪತ್ನಿ ಗಿರಿಜಾ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
IMG-20190611-WA0086
“ಪತಿ ಮತ್ತು ಪುತ್ರಿಯ ಸಾವಿನ ಸುದ್ದಿಗೆ ಪತ್ನಿ ಗಿರಿಜಾ ಶೆಟ್ಟಿ ಆಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದು, ಇವರನ್ನು ಮಗ ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ತಹಶೀಲ್ದಾರ್ ರಶ್ಮಿ ಅವರು ಭೇಟಿ ಮಾಹಿತಿ ಪಡೆದುಕೊಂಡರು. ಇಬ್ಬರು ಗಂಡು ಮಕ್ಕಳ ಪೈಕಿ ಓರ್ವ ಕೆಲಸದಲ್ಲಿದ್ದು, ಮತ್ತೊರ್ವ ಮಗ ತಂದೆಯ ಕೃಷಿ ಕಾರ್ಯದಲ್ಲಿ ಸಹಕರಿಸುತ್ತಿದ್ದ.
ಘಟನಾ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಸ್ಥಳೀಯರು ಜಮಾಯಿಸಿದ್ದು, ಮೆಸ್ಕಾಂ ನಿರ್ಲಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿ ತಿಳಿದ ಮೆಸ್ಕಾಂನ ಹಿರಿಯ ಅಧಿಕಾರಿಗಳು ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲೂ ಆಕ್ರೋಶಿತ ನಾಗರಿಕರು ಮೆಸ್ಕಾಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಹಳೆಯದಾದ ತಂತಿಗಳನ್ನು ಮೆಸ್ಕಾಂ ಇಲಾಖೆ ಬದಲಿಸದೆ ಇರುವುದು ಈ ಘಟನಗೆ ಮೂಲ ಕಾರಣವೆಂದು ಸ್ಥಳೀಯರು ಆರೋಪಿಸಿದರು.
ಗೋಪಾಲಕೃಷ್ಣ ಅವರು ಚೆನ್ನೈತ್ಯೋಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದು, ದಿವ್ಯಾಶ್ರೀ ವಿಕಲಚೇತನರಾಗಿದ್ದಲ್ಲದೆ ಅವಿವಾಹಿತೆಯಾಗಿದ್ದಾರೆ. ಸ್ಥಳಕ್ಕೆ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ಉಪತಹಶೀಲ್ದಾರ್ ರಾಜೇಶ್ ನಾಯ್ಕ್,  ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ಬಂಟ್ವಾಳ ವೃತ್ತ ನಿರೀಕ್ಷಕ ಶರಣಗೌಡ, ಎಸ್ಸೈ ಸುಧಾಕರ ತೋನ್ಸೆ, ಮೆಸ್ಕಾಂ ಎಇಇ ಪ್ರಶಾಂತ್ ಪೈ, ತಾಪಂ ಸದಸ್ಯ ಪ್ರಭಾಕರ ಪ್ರಭು, ಜನಾತ ಬಝಾರ್‌ನ ನಿರ್ದೇಶಕ ಪುರುಷೋತ್ತಮ ಶೆಟ್ಟಿ ವಾಮದಪದವು ಅವರೊಂದಿಗೆ ಮಾಹಿತಿ ಪಡೆದುಕೊಂಡರು.
IMG-20190611-WA0087
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಪರಿಹಾರ ನೀಡಲು ಮೆಸ್ಕಾಂಗೆ ಸೂಚನೆ:
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನ ಪ್ರವಾಸದಲ್ಲಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಮೆಸ್ಕಾಂ ಅಧಿಕಾರಿಗಳಿಗೆ ಕರೆ ಮೂಲಕ ಮಾಹಿತಿ ಪಡೆದುಕೊಂಡಲ್ಲದೆ, ಮೃತರ ಕುಟುಂಬಕ್ಕೆ ಗರಿಷ್ಠ ಪ್ರಮಾಣ ಪರಿಹಾರವನ್ನು ನೀಡುವಂತೆ ಸೂಚನೆ ನೀಡಿದರು.
ಮಾಜಿ ಸಚಿವ ಬಿ. ರಮಾನಾಥ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಆಸ್ಪತ್ರೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ನೀಡಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter