Published On: Thu, Jul 11th, 2019

ಕಲ್ಲಡ್ಕ: ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಣವ ವಿದ್ಯಾರ್ಥಿ ಸಂಘ ಉದ್ಘಾಟನೆ ತಾಂತ್ರಿಕತೆ ಜೊತೆಗೆ ಪ್ರಾಕೃತಿಕ ಶಿಕ್ಷಣಕ್ಕೆ ಒತ್ತು ಅಗತ್ಯ: ಶಾಸಕರ ರಾಜೇಶ ನಾಯ್ಕ್

ಬಂಟ್ವಾಳ:ಪ್ರಸಕ್ತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಜೊತೆಗೆ ಪ್ರಾಕೃತಿಕ ಸೊಗಡಿನ ದೇಶೀಯ ಶಿಕ್ಷಣಕ್ಕೂ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಹೇಳಿದ್ದಾರೆ.ಇಲ್ಲಿನ ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ದಶಮಾನೋತ್ಸವ ಪ್ರಯುಕ್ತ ಪ್ರಣವ ವಿದ್ಯಾರ್ಥಿ  ಸಂಘ ಮತ್ತಿತರ ಸಂಘಗಳನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

10btl-Kalldka
ಶಾಲಾ ಆಡಳಿತ ಮಂಡಳಿ ಸದಸ್ಯ ಚೆನ್ನಪ್ಪ ಆರ್.ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್, ಮಾಜಿ ಶಾಸಕಿ ಮಲ್ಲಿಕಾ ಆರ್.ಪ್ರಸಾದ್, ಜಿಲ್ಲಾ ಎಸ್ಸಿ ಮೋರ್ಚಾ  ಅಧ್ಯಕ್ಷ ದಿನೇಶ್ ಅಮ್ಟೂರು, ಬಾಳ್ತಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಠಲ್ ನಾಯ್ಕ, ಬಂಟ್ವಾಳ ಪುರಸಭಾ ಸದಸ್ಯ ಜಯರಾಮ ಜಿ., ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಉಪ್ಪಿನಂಗಡಿ ಕ್ಷೇತ್ರ ಜಿಲ್ಲಾ ಪಂಚಾಯಿತಿ ಸದಸ್ಯೆ ಶಯನಾ ಜಯಾನಂದ್, ತಾಲ್ಲೂಕು ಪಂಚಾಯಿತಿ ಸದಸ್ಯೆ ಲಕ್ಷ್ಮೀ ಗೋಪಾಲಾಚಾರ್ಯ ಮತ್ತಿತರರು ಇದ್ದರು.

ವಿದ್ಯಾರ್ಥಿ  ಸಂಘದ ನಿತೇಶ್ ಕುಮಾರ್, ಕಾರ್ಯದರ್ಶಿ  ರಶ್ಮಿತಾ ಎಂ.ಎಸ್., ಜತೆಕಾರ್ಯದರ್ಶಿ  ಯಜ್ಞಶ್ರೀ ಪ್ರಮಾಣ ವಚನ ಸ್ವೀಕರಿಸಿದರು. ಇದೇ ವೇಳೆ ರಾಷ್ಟ್ರೀಯ ಸೇವಾ ಯೋಜನೆ, ವಾಣಿಜ್ಯ ಸಂಘ, ಸಾಹಿತ್ಯ ಸಂಘ, ಪರಿಸರ ಸಂಘ, ವಿಜ್ಞಾನ ಸಂಘ, ಸಾಂಸ್ಕೃತಿಕ ಸಂಘ, ಕ್ರೀಡಾ ಸಂಘ, ಮಾನವಿಕ ಸಂಘ ದ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು.ಉಪನ್ಯಾಸಕಿ ಶುಭಲತಾ ಚುನಾವಣಾ ವರದಿ ವಾಚಿಸಿದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ಕಟ್ಟೆ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿ  ಸಂಘದ ಸಹನಿರ್ಧೆಶಕ, ಉಪನ್ಯಾಸಕ ಸಚಿನ್ ಸ್ವಾಗತಿಸಿ, ಉಪನ್ಯಾಸಕ ಯತಿರಾಜ್ ವಂದಿಸಿದರು. ಉಪನ್ಯಾಸಕಿ ಕವಿತಾ ಕಾರ್ಯಕ್ರಮ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter