Published On: Thu, Aug 22nd, 2019

ಹಾಸಿಗೆಯಿಂದ ಮೇಲೆಳಲಾಗದ ಗಾಯಾಳುವಿಗೆ ವೈದ್ಯಕೀಯ ಚಿಕಿತ್ಸೆಗಾಗಿ 5 ಲಕ್ಷ ರೂ.ಮಂಜೂರು

ಬಂಟ್ವಾಳ:  ಅಡಿಕೆ ಮರಬಿದ್ದು ಬೆನ್ನುಹುರಿಗೆ ಗಾಯಗೊಂಡು ಹಾಸಿಗೆಯಿಂದ ಎದ್ದೇಳಲಾಗದ ಅಸಹಾಯಕ ಸ್ಥಿತಿಯಲ್ಲಿರುವ  ಬಂಟ್ವಾಳ ತಾಲೂಕಿನ  ಬಾಳ್ತಿಲ ಗ್ರಾಮದ ವಸಂತಿ ಆಚಾರ್ಯ ಅವರ ಚಿಕಿತ್ಸೆಗೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂ. ನೀಡಲು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ  ಅವರು  ಸಮ್ಮತಿಸಿದ್ದಾರೆ. IMG-20190821-WA0136

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರ ಶಿಫಾರಸ್ಸಿನ ಮೇರೆಗೆ ಇದನ್ನು ವಿಶೇಷ  ಪ್ರಕರಣವಾಗಿ ಪರಿಗಣಿಸಿದ ಮುಖ್ಯಮಂತ್ರಿಯವರು 5 ಲಕ್ಷರೂ.ಚಿಕಿತ್ಸಾ ವೆಚ್ಚ ನೀಡಲು ಸಮ್ಮತಿಸಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.ಕಳೆದ ವಾರ ಶಾಸಕ ರಾಜೇಶ್ ನಾಯ್ಕ್ ಅವರು  ಗಾಯಾಳು ವಸಂತಿ ಆಚಾರ್ಯರವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರಲ್ಲದೆ ವೈದ್ಯಕೀಯ ಚಿಕಿತ್ಸೆಗೆ ವೈಯುಕ್ತಿಕ ಧನಸಹಾಯವನ್ನು ಮಾಡಿ ಸರಕಾರದಿಂದ ಗರಿಷ್ಠ ಪ್ರಮಾಣದ ನೆರವು ಒದಗಿಸುವ ಭರವಸೆ ನೀಡಿದ್ದರು.   IMG-20190813-WA0084

ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಗೃಹಕಚೇರಿ ಕೃಷ್ಣಾದಲ್ಲಿ  ಮುಖ್ಯಮಂತ್ರಿಯವರನ್ನು ಖುದ್ದು ಭೇಟಿಯಾಗಿ ಈ ಪ್ರಕರಣದ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಟ್ಟರು.ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಬಿಎಸ್ ವೈ ಅವರು ಮಾನವೀಯ ನೆಲೆಯಲ್ಲಿ  5 ಲಕ್ಷರೂ.ವನ್ನು  ಮಂಜೂರು ಮಾಡಿದ್ದಾರೆ. ಈ ಸಂದರ್ಭದಲ್ಲಿ ನೂತನ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ,ಬಸವರಾಜ್ ಬೊಮ್ಮಾಯಿ ಮೊದಲಾದವರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter