Published On: Fri, Aug 23rd, 2019

ಬಂಟ್ವಾಳ: ಅಪಘಾತದ ಗಾಯಾಳು ಸಾವು

ಬಂಟ್ವಾಳ:ಕಳೆದ ಸೋಮವಾರ ಸಂಜೆ ಸುರತ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಂಟ್ವಾಳ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

22btl-Lokesh Sapalya
ಮೃತರನ್ನು ಇಲ್ಲಿನ ಪಾಣೆಮಂಗಳೂರು ಸಮೀಪದ ಶೇಡಿಗುರಿ ಕೊಂಕಂದಿಪಾಲು ನಿವಾಸಿ ದಿವಂಗತ ಧರ್ಣಪ್ಪ ಸಪಲ್ಯ ಇವರ ಪುತ್ರ ಲೋಕೇಶ ಸಪಲ್ಯ(34) ಎಂದು ಗುರುತಿಸಲಾಗಿದೆ. ಮೃತರಿಗೆ ತಾಯಿ, ಸಹೋದರ ಮತ್ತು ಸಹೋದರಿ ಇದ್ದಾರೆ.
ಕಳೆದ ಸೋಮವಾರ ಸಂಜೆ ಸುರತ್ಕಲ್ ಎನ್‍ಐಟಿಕೆ ಬಳಿ ಇವರು ಎಂದಿನಂತೆ ಸೆಂಟ್ರಿಂಗ್ ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ವಾಪಾಸು ಬರುತ್ತಿದ್ದ ವೇಳೆ ಇನ್ನೊಂದು ಬೈಕಿಗೆ ಡಿಕ್ಕಿಯಾಗಿ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ತಡರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಗುರುವಾರ ಬೆಳಿಗ್ಗೆ ಮನೆ ಸಮೀಪದ ಮೃತರ ಅಂತ್ಯಕ್ರಿಯೆ ನಡೆಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter