Published On: Wed, Sep 11th, 2019

ಬಿ.ಸಿ.ರೋಡ್-ಮಾಣಿ ಹದಗೆಟ್ಟ ಹೆದ್ದಾರಿ ಬೃಹತ್ ಪ್ರತಿಭಟನಾ ಪಾದಯಾತ್ರೆ

ಬಂಟ್ವಾಳ :  ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್‌ನಿಂದ ಮಾಣಿ ಜಂಕ್ಷನ್ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನಾ ಪಾದಯಾತ್ರೆ ಬುಧವಾರ ಮೆಲ್ಕಾರ್‌ನಿಂದ ಬಿ.ಸಿ.ರೋಡ್‌ವರೆಗೆ ನಡೆಯಿತು. ಈ ಸಂದರ್ಭ    ಮೆಲ್ಕಾರ್ ಜಂಕ್ಷನ್‌ನಲ್ಲಿ ೫ ನಿಮಿಷಗಳ ಕಾಲ ಹೆದ್ದಾರಿ ತಡೆ ಮಾಡಲಾಯಿತು.
ಮೆಲ್ಕಾರ್ ಜಂಕ್ಷನ್‌ನಲ್ಲಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ  ಮಾಜಿ ಸಚಿವ   ರೈ ಅವರು ವಾಹನ        ಸಂಚಾರಕ್ಕೆ ಅಡಚಣೆಯಾಗಿ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ. ಕೇಂದ್ರ, ರಾಜ್ಯ ಸರಕಾರವಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಇದರ ಬಗ್ಗೆ ಯಾವುದೇ ರೀತಿಯ ಗಮನಹರಿಸದ್ದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.


IMG-20190911-WA0040

ಸಂಸದರು ಕೇವಲ ಓಟಿಗಾಗಿ ನಾಟಕ ಮಾಡುತ್ತಿದ್ದಾರೆ. ಇದರಿಂದಲೇ ಹೆದ್ದಾರಿ ಹದಗೆಟ್ಟು ಅಮಾಯಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಹೆದ್ದಾರಿ ಚತುಷ್ಪಥದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಬಿಜೆಪಿ ಜನಪ್ರತಿನಿಧಿಗಳು ಮತ್ತು ಗುತ್ತಿಗೆ ಕಂಪೆನಿಗಳ ನಡುವಿನ ಶೀತಲ ಸಮರವೇ ಇದಕ್ಕೆ ಕಾರಣ. ಆದರೆ, ಭೂಸ್ವಾಧೀನ ಪ್ರಕ್ರಿಯೆಯ ವಿಳಂಬ ಎಂಬ ಕಾರಣವನ್ನು ನೀಡಲಾಗುತ್ತಿದೆ. ಚತುಷ್ಪಥ ಕಾಮಗಾರಿ ಅರ್ಧಕ್ಕೆ ನಿಂತಿರುವುದಕ್ಕೆ ಇದುವೇ ನೈಜ ಕಾರಣವಾಗಿದ್ದರೆ, ತಾನು ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಅವರು ಘೋಷಿಸಿದರಲ್ಲದೆ ರಸ್ತೆ
ದುರಸ್ತಿ ಗಾಗಿ ಎಲ್ಲರು ಪ್ರಧಾನಿಗೆ ಪತ್ರ ಬರೆಯುವಂತೆ ಅವರು ಕರೆ ನೀಡಿದರು.ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಜನತೆಯ ಪ್ರಾಣದ ಜೊತೆ ಚೆಲ್ಲಾಟ ವಾಡದೆ ನೈಜ ಕಾಳಜಿಯಿಂದ ಕೆಲಸ ಮಾಡಬೇಕು. ಎಲ್ಲ ರಸ್ತೆಗಳ ತೇಪೆ ಮಾತ್ರವಲ್ಲ, ಸಂಪೂರ್ಣ ದುರಸ್ತಿ ಮಾಡಬೇಕು ಎಂದು ರೈ ಆಗ್ರಹಿಸಿದರು.

 

IMG-20190911-WA0033

 

ಬಳಿಕ ಪಾದಯಾತ್ರೆಯ ಮೂಲಕ ಬಿ.ಸಿ.ರೋಡ್ ಮಿನಿವಿಧಾನ ಸೌಧಕ್ಕೆ ತೆರಳಿ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.  ಮಾತನಾಡಿದರು.
ಈ ಸಂದರ್ಭದಲ್ಲಿ ವಿಪಸದಸ್ಯ ಹರೀಶ್ ಕುಮಾರ್,    ಜಿಪಂ ಸದಸ್ಯರಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಮಂಜುಳಾ  ಮಾವೆ,ಪ್ರಮುಖರಾದ ಸುದರ್ಶನ ಜೈನ್, ಚಂದ್ರಹಾಸ ಕರ್ಕೇರ, ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲ್ಯಾನ್, ಪದ್ಮನಾಭ ರೈ, ಧನಲಕ್ಮೀ ಸಿ.ಬಂಗೇರ, ಸದಾಶಿವ ಬಂಗೇರ, ಸಿದ್ದೀಕ್ ಗುಡ್ಡೆಯಂಗಡಿ, ಚಿತ್ತರಂಜನ್ ಶೆಟ್ಟಿ, ಲುಕ್ಮಾನ್ ಕೈಕಂಬ, ಪ್ರಶಾಂತ್, ಮುಹಮ್ಮದ್ ನಂದರಬೆಟ್ಟು, ಮಹೇಶ್, ಪರಮೇಶ್ವರ ಮೂಲ್ಯ, ಕಾಂಚಲಾಕ್ಷೀ, ವೆಂಕಪ್ಪ ಪೂಜಾರಿ,  ವಾಸು ಪೂಜಾರಿ, ಶರೀಫ್ ಶಾಂತಿಯಂಗಡಿ, ಜೆಡಿಎಸ್ ಮುಖಂಡರಾದ ಮುಹಮ್ಮದ್ ಶಫಿ, ಪಿ.ಎ.ರಹೀಂ, ಹಾರೂನ್ ರಶೀದ್ ಹಾಜರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಸ್ವಾಗತಿಸಿ, ಸುದೀಪ್ ಕುಮಾರ್ ಮಾಣಿ ಕಾರ್ಯಕ್ರಮ ನಿರೂಪಿಸಿದರು.IMG-20190911-WA0033

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter