Published On: Fri, Nov 8th, 2019

ಜನಪದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಶ್ರೀನಿವಾಸಪುರ: ತಾಲ್ಲೂಕಿನ ಗಾಂಡ್ಲಹಳ್ಳಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನಪದ ನೃತ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀನಿವಾಸಪುರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಗುರುವಾರ, ವಯೋ ನಿವೃತ್ತಿ ಹೊಂದಿದ ಬಿಇಒ ಬಿ.ರೇಣುಕಮ್ಮ ಅವರನ್ನು ಸನ್ಮಾನಿಸಲಾಯಿತು.ಶ್ರೀನಿವಾಸಪುರದಲ್ಲಿ ಕನಕದಾಸ ಜಯಂತಿ ಆಚರಣೆ ಕುರಿತು ಚರ್ಚಿಸಲು ಗುರುವಾರ ಕರೆದಿದ್ದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ತಹಶೀಲ್ದಾರ್ ಕೆ.ಎನ್.ಸುಜಾತ ಮಾತನಾಡಿದರು.
7svp2ep
7svp1epಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಸಮಾರಂಭ ಹಾಗೂ ಮೆರವಣಿಗೆಯಲ್ಲಿ  ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಹಶೀಲ್ದಾರ್‌ ಕೆ.ಎನ್‌.ಸುಜಾತ ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿ ಸಬಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೀರ್ತನೆನಗಳ ಮೂಲಕ ಸಮ ಸಮಾಜದ ಕಲ್ಪನೆಯನ್ನು ಜನರಲ್ಲಿ ಬಿತ್ತಿದ ಕನಕದಾಸರು ಸಮಾಜದ ಎಲ್ಲ ವರ್ಗದ ಜನರ ಗೌರವಕ್ಕೆ ಪಾತ್ರರಾಗಿದ್ದಾರೆ. ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿವಿಧ ಸಂಘ ಸಂಸ್ಥೆಗಳ ಜೊತೆಗೂಡಿ ಜಯಂತಿ ಆಚರಿಸುವುದು  ಎಂದು ಹೇಳಿದರು.
ಪಟ್ಟಣದಲ್ಲಿ ಕನಕದಾಸರ ಭಾವ ಚಿತ್ರ ಮೆರವಣಿಗೆ ಏರ್ಪಡಿಸಲಾಗಿದೆ. ತಾಲ್ಲೂಕಿನ ಬೇರೆ ಬೇರೆ ಗ್ರಾಮಗಳಿಂದಲೂ ಕನಕದಾಸರ ಭಾವ ಚಿತ್ರ ಹೊತ್ತ ರಥಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಮಾತನಾಡಿ, ಕನಕದಾಸರ ಜಯಂತಿ ಮಾನವ ಕುಲದ ಜಯಂತಿ. ಜಾತಿ ವ್ಯವಸ್ಥೆಯ ವಿರುದ್ಧ ತಮ್ಮದೇ ಆಧ ರೀತಿಯಲ್ಲಿ ಖಂಡಿಸಿದ ಕನಕದಾಸರು ಸರ್ವಮಾನ್ಯರಾಗಿದ್ದಾರೆ. ಅವರ ಜಯಂತಿ ಸಮಾರಂಭವನ್ನು ತಾಲ್ಲೂಕು ಕಚೇರಿ ಎದುರು ಏರ್ಪಡಿಸಲಾಗುವುದು ಎಂದು ಹೇಳಿದರು.ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ, ಎಂ.ವೇಮಣ್ಣ, ಕಾರ್ಯದರ್ಶಿ ಎಸ್‌.ಎನ್‌.ನಾರಾಯಣಸ್ವಾಮಿ, ಮುಖಂಡರಾದ ಕೆ.ಎಂ.ಚೌಡಪ್ಪ, ಮಂಜು ಇದ್ದರು.
 ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter