Published On: Mon, Jan 13th, 2020

ಸಿದ್ದಕಟ್ಟೆ ಕಾಲೇಜಿನಲ್ಲಿ ಯುವ ರಾಷ್ಟ್ರೀಯ ಸಪ್ತಾಹ

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಸಾಂಸ್ಕೃತಿಕ ಸಂಘ, ರೋವರ್ ರೇಂಜರ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ಸಪ್ತಾದ ಕಾರ್ಯಕ್ರಮ ಜರಗಿತು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರತ್ನಕುಮಾರ್ ಚೌಟ ಅವರು ಕಾರ್ಯಕ್ರಮ ಉದ್ಘಾಟಿಸಿ, ಯುವ ಸಮುದಾಯ ವಿವೇಕಾನಂದರ ಚಿಂತನೆಯನ್ನು ಮೈಗೂಡಿಸಿ ಆದರ್ಶಪ್ರಾಯವಾಗಿರಬೇಕು ಎಂದರು.

IMG-20200112-WA0049

ಮುಖ್ಯ ಅತಿಥಿಯಾಗಿದ್ದ ಆಳ್ವಾಸ್ ಕಾಲೇಜು ಮೂಡಬಿದ್ರೆಯ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಜ್ಯೋತಿ ರೈ ಮಾತನಾಡಿ, ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ವಿವೇಕಾನಂದರ ಚಿಂತನೆಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ಯುವ ಸಮುದಾಯವು ತಮ್ಮ ಕರ್ತವ್ಯವನ್ನರಿತು ಶ್ರಮ ವಹಿಸಿದಾಗ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ನಸೀಮಾ ಬೇಗಂ ಎಸ್.  ಪ್ರಾಸ್ತಾವಿಕ ಮಾತನಾಡಿದರು. ಕವಿತಾ ಸ್ವಾಗತಿಸಿ, ರೋಶನ್ ವಂದಿಸಿದರು. ನಿಶ್ವಿತಾ ಕಾರ್ಯಕ್ರಮ ನಿರೂಪಿಸಿದರು.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter