Published On: Sun, Jan 21st, 2018

ಆಕಸ್ಮಿಕ ಬೆಂಕಿ ಅವಘಡ: ವಾಹನ ಸೇರಿ16 ಅಂಗಡಿಗಳು ಭಸ್ಮ

Koratagi

ಗಂಗಾವತಿ: ಆಕಸ್ಮಿಕ ಅಗ್ನಿ ಅವಘಡದಿಂದ ಅನಿಲದ ಸಿಲೆಂಡರ್ ಸ್ಫೋಟಗೊಂಡ ಪರಿಣಾಮ ವಾಹನ ಸೇರಿ 16 ಅಂಗಡಿಗಳು ಭಸ್ಮವಾಗಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರಟಗಿಯಲ್ಲಿ ರವಿವಾರ ಬೆಳಗ್ಗಿನ ಜಾವ ನಡೆದಿದೆ,

 

ಈ ಅಗ್ನಿ ಅವಘಡದಿಂದ  ರಾಜ್ಯ ಹೆದ್ದಾರಿಯಲ್ಲಿದ್ದ ವಿಶೇಷ ತಹಶೀಲ್ದಾರ್ ಕಛೇರಿಯ ಮುಂಭಾಗದ ಶೆಡ್ ಗಳೂ ಸಹ ಸುಟ್ಟು ಭಸ್ಮವಾಗಿದ್ದು, ಈ ಶೆಡ್ ಗಳಲ್ಲಿ ಮೆಕ್ಯಾನಿಕ್, ಕಟಿಂಗ್ ಶಾಪ್, ಹೊಟೇಲ್, ಪಾನ್ ಅಂಗಡಿಗಳು ಇದ್ದು ಒಂದೊಂದರಲ್ಲಿ ಇಬ್ಬರು ಅಥವಾ ಮೂವರು ವ್ಯಾಪಾರ ನಡೆಸುತ್ತಿದ್ದರು. ಇದರಿಂದ ಯಾವುದೇ ಜೀವಹಾನಿಯಾಗಿಲ್ಲ.

ಸುದ್ದಿ ತಿಳಿದುತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದೆ.

 

ಘಟನಾ ಸ್ಥಳಕ್ಕೆ ಶಾಸಕರಾದ ಶಿವರಾಜ್ ತಂಗಡಗಿ, ಕಂದಾಯ, ಪೊಲೀಸ್, ಅಗ್ನಿಶಾಮಕ ಠಾಣೆ, ಜೆಸ್ಕಾಂ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಪ್ರಕರಣಕ್ಕೆ ನಿಖರ ಕಾರಣ ಪತ್ತೆಯಾಗಿಲ್ಲ.

 

ಈ ಬಗ್ಗೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter