Published On: Tue, Feb 13th, 2018

ಕೋಮು ಸೌಹಾರ್ದ ಕೆರಳಿಸುವ ಹೇಳಿಕೆ ಬೇಡ: ಅನಂತ್ ಕುಮಾರ್ ಹೆಗ್ಡೆಗೆ ಬಿಎಸ್ ವೈ ಸೂಚನೆ!

25bsy1

ಬೆಂಗಳೂರು: ಯಾರೊಬ್ಬರು ಸಮುದಾಯಗಳನ್ನು ಕೆರಳಿಸುವ ಹೇಳಿಕೆ ನೀಡಬಾರದು. ನಾನು ಅಂತಹ ಯಾವುದೇ ಹೇಳಿಕೆಗಳನ್ನು ಒಪ್ಪುವುದಿಲ್ಲ. ಅನಂತ ಕುಮಾರ್ ಹೆಗ್ಡೆಗೆ ನಾನು ಇಂತಹ ಹೇಳಿಕೆಗಳನ್ನು ನೀಡದಂತೆ ಸೂಚನೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿವಾಹಿನಿಯೊಂದಿಗೆ ಮಾತನಾಡಿ ಅವರು,  ಯಾವುದೇ ನಾಯಕನೂ ಕೂಡ ಸಮುದಾಯಗಳ ಭಾವನೆ ಕೆರಳಿಸುವ ಹೇಳಿಕೆ ನೀಡಬಾರದು. ಧಾರ್ಮಿಕ ಧ್ರುವೀಕರಣದಿಂದ ರಾಜಕೀಯ ಲಾಭ ಪಡೆಯುವ ಉದ್ದೇಶ ಬಿಜೆಪಿಗೆ ಇಲ್ಲ. ಕೋಮುಗಳ ನಡುವಿನ ಸೌಹಾರ್ಧ ಸಂಬಂಧ ಕೆರಳಿಸುವ ಹೇಳಿಕೆಗಳನ್ನು ನೀಡಬೇಡಿ.  ಆದರೆ ಈ ಕೆಲಸ ಮಾಡುತ್ತಿರುವುದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದು ದೂರಿದರು.

ಅನಂತ್ ಕುಮಾರ್ ಹೆಗ್ಡೆ ವಿಚಾರದಲ್ಲಿ ನಾನು ಸಮರ್ಥಿಸಿಕೊಳ್ಳುವುದಿಲ್ಲ. ಈ ಬಗ್ಗೆ  ಹೆಗ್ಡೆ ಅವರಿಗೆ ಈ ಬಗ್ಗೆ ಸಲಹೆ ನೀಡಲಾಗಿದ್ದು, ಹೆಗ್ಡೆ ಕೂಡ ತಮ್ಮ ಹೇಳಿಕೆ ಸಂಬಂಧ ಸಂಸತ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ ಎಂದವರು,

 ತಾನು ಕೋಮುವಾದಿ ಅಲ್ಲ ಎನ್ನುತ್ತಲೇ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೋಮುವಾದಿ ರಾಜಕಾರಣ ಮಾಡುತ್ತಿದೆ. ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣೆ ಹತ್ತಿರಕ್ಕೆ ಬರುತ್ತಲೇ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

 

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter