Published On: Mon, Mar 12th, 2018

ಗೌರಿ ಹತ್ಯೆ ಪ್ರಕರಣ: ಹೊಟ್ಟೆ ಮಂಜನ ಮಂಪರು ಪರೀಕ್ಷೆಗೆ ಕೋರ್ಟ್ ಷರತ್ತುಬದ್ಧ ಆದೇಶ

eab20ab08b250ea9ebf5a109ded9b4f1

ಬೆಂಗಳೂರು: ಪತ್ರಕರ್ತೆ ಗೌರಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನವೀನ್ ಕುಮಾರ ಅಲಿಯಾಸ್ ಹೊಟ್ಟೆ ಮಂಜನ ಮಂಪರು ಪರೀಕ್ಷೆ ನಡೆಸಲು ಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಮೂರನೇ ಎಸಿಎಂಎಂ ಕೋರ್ಟ್ ಈ ಆದೇಶ ಹೊರಡಿಸಿದೆ.

ಎಸ್‌ಐಟಿ ಅಧಿಕಾರಿಗಳು ನವೀನ್ಗೆ ಮಂಪರು ಪರೀಕ್ಷೆ ನಡೆಸಲು ಅವಕಾಶ ಕೋರಿ ಮೂರನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಮನವಿ ಸಲ್ಲಿಸಿದ್ದರು. ಇಂದು ಈ ಬಗ್ಗೆ ಆದೇಶ ಹೊರಡಿಸಿದ ನ್ಯಾಯಾಧೀಶ ವೆಂಕಣ್ಣ ಹೊಸಮನಿ ಮಂಪರು ಪರೀಕ್ಷಗೆ ಅನುಮತಿ ನೀಡಿದ್ದಾರೆ. ಇಂದು ಕೋರ್ಟ್ನಲ್ಲಿ ವಿಚಾರಣೆ ನಿಗದಿಯಾಗಿದ್ದರಿಂದ ಎಸ್‌ಐಟಿ ಅಧಿಕಾರಿಗಳು ಹೊಟ್ಟೆ ಮಂಜನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಮಂಪರು ಪರೀಕ್ಷೆಗೆ ಒಳಪಡಿಸುವ ಬಗ್ಗೆ ನ್ಯಾಯಾಧೀಶರು ಹೊಟ್ಟೆ ಮಂಜನ ಅಭಿಪ್ರಾಯ ಕೇಳಿದಾಗ ಆತ ಮಂಪರು ಪರೀಕ್ಷೆಗೆ ನ್ಯಾಯಾಲಯದಲ್ಲೇ ಒಪ್ಪಿಕೊಂಡಿದ್ದಾನೆ.

ಆರೋಗ್ಯದ ಮೇಲೆ ಏನೂ ಪರಿಣಾಮ ಬೀರುವುದಿಲ್ಲವಾದರೆ ಒಪ್ಪಿಕೊಳ್ಳುತ್ತೇನೆ ಎಂದು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾನೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಯ ಮಂಪರು ಪರೀಕ್ಷೆ ನಡೆಸಲು ಒಪ್ಪಿಗೆ ನೀಡಿದೆ.ಇದೇ ವೇಳೆ ನ್ಯಾಯಾಲಯ ಹೊಟ್ಟೆಮಂಜನನ್ನು ಮಾ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತು. ಸುಪ್ರೀಂಕೋರ್ಟ್ ಮತ್ತು ಮಾನವಹಕ್ಕು ಮಾರ್ಗಸೂಚಿಯಂತೆ ಮಂಪರು ಪರೀಕ್ಷೆ ನಡೆಸುವಂತೆ ಕೋರ್ಟ್ ಸೂಚನೆ ನೀಡಿತು. ಆಸ್ಪತ್ರೆಯಲ್ಲಿ ಅಥವಾ ಮಂಪರು ಪರೀಕ್ಷಾ ಕೇಂದ್ರದಲ್ಲೇ ಆರೋಪಿಯ ಮಂಪರು ಪರೀಕ್ಷೆ ನಡೆಯಬೇಕು. ಆರೋಪಿಗೆ ಮಾನಸಿಕವಾಗಿ ಅಥವಾ ದೈಹಿಕವಾಗಿ ಹಿಂಸೆ ನೀಡುವಂತಿಲ್ಲ. ಈ ವೇಳೆ ಆರೋಪಿಯ ಆರೋಗ್ಯಕ್ಕೆ ಯಾವುದೇ ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸುಂತೆ ಎಸ್‌ಐಟಿ ಅಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter