Published On: Tue, Mar 13th, 2018

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುಂಜಾಲಕಟ್ಟೆ ಘಟಕ ಉದ್ಘಾಟನೆ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪುಂಜಾಲಕಟ್ಟೆ ಘಟಕದ ಉದ್ಘಾಟನಾ ಕಾರ್ಯಕ್ರಮ ಮಾ. 17ರಂದು ಸಂಜೆ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಸ್ಥಾಪಕಾಧ್ಯಕ್ಷ, ಯಕ್ಷಗಾನ ಭಾಗವತ ಸತೀಶ್ ಶೆಟ್ಟಿ ಪಟ್ಲಗುತ್ತು ಅವರು ಹೇಳಿದರು.1203pkt3

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಂಗಣದಲ್ಲಿ ರವಿವಾರ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪುಂಜಾಲಕಟ್ಟೆ ಘಟಕದ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಯಕ್ಷಗಾನ ಕಲಾವಿದರು ಜೀವನ ಪೂರ್ತಿ ನೆಮ್ಮದಿಯಿಂದಿರಬೇಕೆಂಬ ಸದುದ್ದೇಶದಿಂದ ಟ್ರಸ್ಟ್ ಸ್ಥಾಪಿಸಲಾಗಿದ್ದು, ಯಕ್ಷಗಾನದ ಕಲಾವಿದರ ಸಂರಕ್ಷಣೆಗಾಗಿ ಪಟ್ಲ ಫೌಂಡೇಶನ್ ಕಾರ್ಯ ನಿರ್ವಹಿಸುತ್ತಿದೆ, ಹಿರಿಯ ಕಲಾವಿದರಿಗೆ ಪಟ್ಲ ಪ್ರಶಸ್ತಿ, ಯಕ್ಷಗೌರವ, ಅಶಕ್ತ ಕಲಾವಿದರಿಗೆ ಗೌರವ ಧನ, ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ನೀಡುತ್ತಿದೆ ಎಂದ ಅವರು ಅಶಕ್ತ ಕಲಾವಿದರಿಗೆ ನೂರು ಮನೆಗಳನ್ನು ನಿರ್ಮಿಸಿ ಕೊಡುವ ಮಹತ್ವದ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ಟ್ರಸ್ಟ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

ಉಪನ್ಯಾಸಕ, ಯಕ್ಷಗಾನ ಅರ್ಥಧಾರಿ ಮಧುಕರ ಮಲ್ಯಅವರು ನೂತನ ಘಟಕವನ್ನು ಉದ್ಘಾಟಿಸಲಿರುವರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿರುವರು. ಬಳಿಕ ಗಾನ ನಾಟ್ಯ ವೈಭವ ಮತ್ತು ಯಕ್ಷಗಾನ ಪ್ರದರ್ಶನವಿದೆ ಎಂದು ಹೇಳಿದರು.ಜಿ.ಪಂ.ಸದಸ್ಯ ಎಂ. ತುಂಗಪ್ಪ ಬಂಗೇರ ಮುಖ್ಯ ಅತಿಥಿಯಾಗಿ ಮಾತನಾಡಿ, ಯಕ್ಷ ಕಲಾವಿದರ ಸಶಕ್ತತೆಗೆ ಹಾಗೂ ಯಕ್ಷಗಾನದ ಬೆಳವಣಿಗೆಗೆ ಮಹತ್ತರ ಕೊಡುಗೆ ಸಲ್ಲಿಸುತ್ತಿರುವ ಯಕ್ಷಧ್ರುವ ಟ್ರಸ್ಟ್ ನ ಸಾಮಾಜಿಕ ಸೇವಾ ಕಾರ್ಯಗಳು ಅಭಿನಂದನೀಯ ಎಂದರು.

ಯಕ್ಷ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ಅವರು ಉದ್ಘಾಟನಾ ಕಾರ್ಯಕ್ರಮದ ಮಾಹಿತಿ ನೀಡಿದರು. ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಪುಂಜಾಲಕಟ್ಟೆ ಘಟಕ ಗೌರವಾಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ವಾಮದಪದವು,ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಪ್ರ.ಕಾರ್ಯದರ್ಶಿ ಕಮಲ್ ಶೆಟ್ಟಿ ಬೊಳ್ಳಾಜೆ, ಪ್ರಮುಖರಾದ ಜಯಂತ ಶೆಟ್ಟಿ, ಮಂಜಪ್ಪ ಮೂಲ್ಯ, ವಾಮದಪದವು ಸಿ.ಎ. ಬ್ಯಾಂಕ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ಮಹಿಳಾ ಸಮಿತಿಯ ಪದಾ„ಕಾರಿಗಳಾದ ಲಕ್ಷ್ಮೀ ಸಂಜೀವ ಶೆಟ್ಟಿ, ತುಳಸಿ ಹಾರಬೆ ಹಾಗೂ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಕಲಾವಿದ ದಿವಾಕರ್ ದಾಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಉದಯ ಕುಮಾರ್ ಶೆಟ್ಟಿ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter