Published On: Fri, Apr 13th, 2018

65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ

success

ನವದೆಹಲಿ: ACME ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹಾಗೂ ಹೆಸರಾಂತ ಹಿನ್ನೆಲೆ ಗಾಯಕ ಶ್ರೀ ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ, ಹಿರಿಯ ನಿರ್ದೇಶಕ ಕೂಡ್ಲು ರಾಮಕೃಷ್ಣ ನಿರ್ದೇಶನದ ‘ಮಾರ್ಚ್ 22’  ಕನ್ನಡ ಚಿತ್ರದ ಹಾಡಿಗೆ ಅತ್ಯುತ್ತಮ ಗೀತರಚನೆ ಪ್ರಶಸ್ತಿ ಲಭಿಸಿದೆ.

65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಪ್ರತಿಷ್ಠಿತ 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶುಕ್ರವಾರ ಏಪ್ರಿಲ್ 13 ರಂದು ಹೊಸದಿಲ್ಲಿಯ ಶಾಸ್ತ್ರಿ ಭವನದ ಪತ್ರಿಕಾ ಮಾಹಿತಿ ಬ್ಯೂರೋದ ಕಾನ್ಫರೆನ್ಸ್ ಕೊಠಡಿಯಲ್ಲಿ ಪ್ರಕಟಿಸಲಾಯಿತು.

ಮಂಗಳೂರು ಮೂಲದ ಶ್ರೀ ಹರೀಶ್ ಶೇರಿಗಾರ್ ಅವರ  ‘ಮಾರ್ಚ್ 22’  ಕನ್ನಡ ಚಿತ್ರದ “ಮುತ್ತು ರತ್ನದ ಪೇಟೆ, ಚಿಧ್ರವಾಯಿತೇ ಕೋಟೆ” ಸುಮಧುರ ಹಾಡಿನ ರಚನೆಗೆ ಗೀತಾ ರಚನೆಕಾರ ಪ್ರಹಲ್ಲಾದ್ ಅವರಿಗೆ ಅತ್ಯುತ್ತಮ ಗೀತರಚನೆ ಪ್ರಶಸ್ತಿ ಲಭಿಸಿದೆ. ದುಬೈನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಹೆಸರಾಂತ ಉದ್ಯಮಿ ಹಾಗೂ ಕನ್ನಡಿಗ ಪದ್ಮಶ್ರೀ ಡಾ. ಬಿ.ಆರ್ ಶೆಟ್ಟಿ ಅವರು ಈ ಹಾಡಿನಲ್ಲಿ ಅಭಿನಯಿಸುವ ಮೂಲಕ ತಮ್ಮ ನಟನ ಕೌಶಲ್ಯವನ್ನು ಮೆರೆದಿದ್ದಾರೆ.

ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಹೆಬ್ಬೆಟ್ಟು ರಾಮಕ್ಕ’ ಆಯ್ಕೆಯಾಗಿದೆ. ಈ ಸಲದ 2017ರ ಅತ್ಯುತ್ತಮ ನಟ ಪ್ರಶಸ್ತಿಗೆ ‘ರುಸ್ತುಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅಕ್ಷಯ್ ಕುಮಾರ್ ಭಾಜನರಾಗಿದ್ದಾರೆ. ದಿವಂಗತ ನಟಿ ಶ್ರೀದೇವಿಗೆ, ಮಾಮ್ ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ. ಮಲಯಾಳಂ ಚಿತ್ರ ಮಿನ್ನಮಿನುಂಗು ಚಿತ್ರದ ನಟನೆಗಾಗಿ ಸುರಭಿ ಲಕ್ಷ್ಮೀ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.

ಇದಲ್ಲದೇ ಅಬ್ಬಾಸ್ ಆಲಿ ಮೊಘಲ್ ಗೆ ಬೆಸ್ಟ್ ಆಕ್ಷನ್ ಡೈರೆಕ್ಷನ್ ಅವಾರ್ಡ್,. ಬಾಹುಬಲಿ ದ ಕನ್ ಕ್ಲೂಷನ್ ಚಿತ್ರದ ಸಾಹಸ ನಿರ್ದೇಶನಕ್ಕೆ ಪ್ರಶಸ್ತಿ. ಅತ್ಯುತ್ತಮ ಗಾಯಕ ಪ್ರಶಸ್ತಿಯನ್ನು ಯೇಸುದಾಸ್ ಹಾಗೂ ಅತ್ಯುತ್ತಮ ನಟ – ರಿದ್ದಿ ಸೇನ್ (ಚಿತ್ರ ಬೆಂಗಾಳಿಯ ನಗರ್ ಕೀರ್ತನ್), ಬೆಸ್ಟ್ ಹಿಂದಿ ಫಿಲ್ಮ್ – ನ್ಯೂಟನ್ ಗೆ ನೀಡಲಾಗಿದೆ.

ಮೇ. 3ರಂದು ಪ್ರಶಸ್ತಿ ಪ್ರದಾನ ಸಮಾರಂಭ ನವದೆಹಲಿಯಲ್ಲಿ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಈ ಸಲದ ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಖ್ಯಾತ ನಿರ್ದೇಶಕ ಶೇಖರ್ ಕಪೂರ್ ಕಾರ್ಯನಿರ್ವಹಿಸಿದ್ದಾರೆ. ಹತ್ತು ಸದಸ್ಯರನ್ನು ಒಳಗೊಂಡಿರುವ ಆಯ್ಕೆ ಸಮಿತಿಯಲ್ಲಿ ಚಿತ್ರಕಥೆಗಾರರಾದ ಇಮ್ತಿಯಾಜ್ ಹುಸ್ಸೇನ್, ಗೀತಸಾಹಿತಿ ಮೆಹಬೂಬ್, ನಟಿ ಗೌತಮಿ ತಡಿಮಲ್ಲ, ಕನ್ನಡದ ನಿರ್ದೇಶಕ ಪಿ ಶೇಷಾದ್ರಿ, ಅನಿರುದ್ಧ್ ರಾಯ್ ಚೌದರಿ, ರಂಜಿತ್ ದಾಸ್, ರಾಜೇಶ್ ಮಪುಸ್ಕರ್, ತ್ರಿಪುರಾರಿ ಶರ್ಮಾ ಮತ್ತು ರುಮಿ ಜಾಫ್ರಿ ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter