Published On: Wed, Apr 25th, 2018

ಮಂಗಳೂರು: ಸಂತ್ರಸ್ತ ಬಾಲಕಿ ಹೆಸರು, ಗುರುತು ತೆರವಿಗೆ ಜಿಲ್ಲಾಧಿಕಾರಿ ಆದೇಶ

SASIKANTH_SENTHIL_1

ಮಂಗಳೂರು: ಜಮ್ಮು ಕಾಶ್ಮೀರದ, ಕಥುವಾದಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸುವ ಭರದಲ್ಲಿ ಆ ಸಂತ್ರಸ್ತೆ ಬಾಲಕಿಯ ಹೆಸರು ಮತ್ತು ಭಾವಚಿತ್ರವನ್ನು ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಹಾಗೂ ಫ್ಲೆಕ್ಸ್ ಬ್ಯಾನರ್ ಮೂಲಕ ಪ್ರದರ್ಶಿಸಲಾಗುತ್ತಿದ್ದು, ಇದು ಶಿಕ್ಷಾರ್ಹ ಅಪರಾಧ ಎಂದು ದ.ಕ.ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ ಕಾಯ್ದೆ) 2012 ರ ಸೆಕ್ಷನ್ 23(2) ರ ಪ್ರಕಾರ ಹಾಗೂ ಮಕ್ಕಳ ನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015 ರ ಸೆಕ್ಷನ್ 74 ರ ಪ್ರಕಾರ 18 ವರ್ಷದೊಳಗಿನ ಸಂತ್ರಸ್ಥ ಮಕ್ಕಳ ಹೆಸರು ಮತ್ತು ಗುರುತನ್ನು ಬಹಿರಂಗೊಳಿಸುವುದು ಶಿಕ್ಷಾರ್ಹ ಅಪರಾಧ. ಅದ್ದರಿಂದ ಸಂತ್ರಸ್ತ ಬಾಲಕಿಯ ಹೆಸರು ಮತ್ತು ಭಾವಚಿತ್ರ ಇರುವ ಫ್ಲೆಕ್ಸ್ ಮತ್ತು ಹೋರ್ಡಿಂಗ್ಸ್‍ನ್ನು ಕೂಡಲೇ ತೆರವುಗೊಳಿಬೇಕು ಎಂದು ದ.ಕ. ಜಿಲ್ಲಾಧಿಕಾರಿಗಳ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter