Published On: Wed, May 9th, 2018

ಅಸೈಗೋಳಿ: ಕಾಂಗ್ರೆಸ್ ಪ್ರಚಾರ ಸಭೆ

UT KHADAR

ಮುಡಿಪು: ಇಲ್ಲಿನ ಅಸೈಗೋಳಿಯ ಕೇಂದ್ರ ಮೈದಾನದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆ ನಡೆಯಿತು.

ಈ ವೇಳೆ ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಮಾತನಾಡಿ, ಬಿಜೆಪಿಯವರು ಅನ್ನಭಾಗ್ಯವನ್ನು ಕನ್ನಭಾಗ್ಯ ಎಂದೆಲ್ಲಾ ಟೀಕಿಸುತ್ತಿದ್ದಾರೆ. ಆದರೆ ರಾಜ್ಯದ ಬಡಜನರ ಹಸಿವು ನೀಗಿಸಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದು ತಿಳಿಸಿದರು.

ಕಳೆದ ಐದು ವರ್ಷದ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ರಾಜ್ಯದ ಅಭಿವೃದ್ಧಿಯೊಂದಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಬೇರೆ ಬೇರೆ ಯೋಜನೆಗಳನ್ನು ಜಾರಿಗೆ ತಂದಿರುವ ಪರಿಣಾಮ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಹಕ್ಕುಪತ್ರ, ಪಡಿತರ ಚೀಟಿ ಸೇರಿದಂತೆ ಜನರ ಮೂಲಭೂತ ಸೌಲಭ್ಯಗಳ ವಿಸ್ತರಣೆಗೆ ಪ್ರಾಮಾಣಿಕವಾದ ಪ್ರಯತ್ನ ಮಾಡಿದ್ದೇನೆ. ಯಾರೋ ಎಷ್ಟೇ ನನ್ನ ಬಗ್ಗೆ ಅಪಪ್ರಚಾರ ನಡೆಸಿಕೊಂಡು ಬಂದರೂ ಕ್ಷೇತ್ರದ ಮತದಾರರು ಜಾತಿ ಮತ ಬೇಧವಿಲ್ಲದೆ ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಚಿವ ಸುರೇಶ್ ಶೆಟ್ಟಿ ಮಾತನಾಡಿ, ಪ್ರಧಾನಿ ಮೋದಿ ಓರ್ವ ಸುಳ್ಳುಗಾರ. ಸುಳ್ಳುಗಳನ್ನೇ ಬಂಡವಾಳವನ್ನಾಗಿಸಿ ದೇಶದಲ್ಲಿ ಮೋದಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆದರೆ ಕರ್ನಾಟಕದ ಜನತೆ ಈ ರೀತಿಯ ಮೋಸದಾಟಕ್ಕೆ ಬಲಿಯಾಗುವುದಿಲ್ಲ. ಮತ್ತೊಮ್ಮೆ ಇಲ್ಲಿ ಕಾಂಗ್ರೆಸ್ ಆಡಳಿತ ನಡೆಸುವುದು ಶತಸಿದ್ಧ ಎಂದರು.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter