Published On: Tue, May 15th, 2018

ಇವಿಎಂ ಸಂಶಯ: ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ನ 7 ಅಭ್ಯರ್ಥಿಗಳಿಂದ ದೂರು!

2018

ಮಂಗಳೂರು: ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’ ಎಂದು ಆಕ್ಷೇಪ ದಾಖಲಿಸಿದ್ದಾರೆ.

ಬೋಂದೆಲ್‌ನಲ್ಲಿರುವ ಮತ ಎಣಿಕೆಯ ಕೇಂದ್ರಕ್ಕೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’. ಕಾಂಗ್ರೆಸ್ ಪಕ್ಷವು 8 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೆ ಫಲಿತಾಂಶ ಸಂಪೂರ್ಣ ಬದಲಾಗಿದೆ ಎಂದು ಆಕ್ಷೇಪ ದಾಖಲಿಸಿದರು.

ದ.ಕ.ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷವು 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ನೇತೃತ್ವದಲ್ಲಿ ಪಕ್ಷದ ಇತರ 7 ಅಭ್ಯರ್ಥಿಗಳು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿ ರಿಟರ್ನಿಂಗ್ ಆಫೀಸರ್ ಮುಂದೆ ಆಕ್ಷೇಪ ದಾಖಲಿಸಿದ್ದಾರೆ.

ಮಾತ್ರವಲ್ಲ ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಲು ನಿರ್ಧರಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter