Published On: Tue, May 15th, 2018

ನೂರಾರು ಕಾರ್ಯಕರ್ತರೊಂದಿಗೆ ರಾಜೇಶ್ ನಾಯ್ಕ್ ಪೊಳಲಿಗೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ

1

ಬಂಟ್ವಾಳ: ದ.ಕ.ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರ ಎನಿಸಿಕೊಂಡಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈಗೆ ಭಾರೀ ಅಂತರದಿಂದ ಸೋಲು ಕಾಣಿಸಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ರಾಜೇಶ್ ನಾಯ್ಕ್ ಅವರು ತಾಲೂಕಿನ ಶ್ರೀ ಕ್ಷೇತ್ರ ಪೊಳಲಿಗೆ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಪದ್ಮನಾಭ ಕೊಟ್ಟಾರಿ, ಪ್ರಸಾದ್, ಬಿಜೆಪಿ ಸ್ಥಳೀಯ ಮುಖಂಡರು ಹಾಗೂ ರಾಜೇಶ್ ನಾಯ್ಕ್ ಕುಟುಂಬಸ್ಥರು ಭಾಗವಹಿಸಿದ್ದರು.

2

3

4

5

6

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter