Published On: Wed, May 16th, 2018

ಬಿಜೆಪಿ ಗೆಲುವು ಮೃತ ಹಿಂದೂ ಕಾರ್ಯಕರ್ತರಿಗೆ ಸಮರ್ಪಣೆ: ನಳಿನ್ ಕುಮಾರ್ ಕಟೀಲ್

 

 

 

whatsapp-image-2017-09-08-at-10.50.02-am

ಮಂಗಳೂರು: ಕರಾವಳಿಯಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಬಿಜೆಪಿಯ ದಿಗ್ವಿಜಯವನ್ನು ದುಷ್ಕರ್ಮಿಗಳ ದಾಳಿಗೆ ಬಲಿಯಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ್ , ದೀಪಕ್ ರಾವ್ ಮಡಿಲಿಗೆ ಅರ್ಪಣೆ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಜನಾಶೀರ್ವಾದ ಬಿಜೆಪಿಗೆ ದೊರೆತಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ರಲ್ಲಿ ಬಿಜೆಪಿ ಆಭ್ಯರ್ಥಿಗಳು ಜಯಗಳಿಸಿದ್ದಾರೆ. ದುರಾಡಳಿತ, ಭ್ರಷ್ಟಾಚಾರ, ಕೋಮುಭಾವನೆ ಕೆರಳಿಸುವ ಗೂಂಡಾಗಿರಿ ರಾಜಕಾರಣದಿಂದ ಜನರು ಬೇಸತ್ತಿದ್ದರು. ಈ ಹಿನ್ನೆಲೆಯಲ್ಲಿ ಕರಾವಳಿಯ ಜನರು ಕಾಂಗ್ರೆಸ್ ಪಕ್ಷವನ್ನು ತಿಸ್ಕರಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

 

ಈ ಚುನಾವಣೆ ಕಾಂಗ್ರೆಸ್ ಮುಕ್ತ ಕರ್ನಾಟಕ, ಕಾಂಗ್ರೆಸ್ ಮುಕ್ತ ಕರಾವಳಿ ಸಂದೇಶ ನೀಡಿದೆ. ಈ ಚುನಾವಣೆಯಲ್ಲಿ ಪೇಜ್‌ ಪ್ರಮುಖರು ಮಹತ್ವದ ಪಾತ್ರ ವಹಿಸಿದ್ದರಿಂದ ಗೆಲುವು ಸಾಧ್ಯವಾಗಿದೆ ಎಂದರು.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter