Published On: Fri, May 18th, 2018

ಕೊಲ್ಲರಕೋಡಿ: ದುಷ್ಕರ್ಮಿಗಳಿಂದ ಮದ್ರಸಕ್ಕೆ ಕಲ್ಲು ತೂರಾಟ

kollarakodi 600

ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಮದ್ರಸಕ್ಕೆ ಕಲ್ಲು ತೂರಾಟ ನಡೆಸಿದ ಪರಾರಿಯಾದ ಘಟನೆ ನಗರದ ಕೊಣಾಜೆ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ಕೊಲ್ಲರಕೋಡಿ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ದುಷ್ಕೃತ್ಯ ನಡೆದ ಕೂಡಲೇ ವಿಷಯ ಅರಿತು ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಮುಂದುವರಿಸಿದ್ದಾರೆ.

ಇದೀಗ ಪ್ರಕರಣಕ್ಕೆ ಸಂಬಂಧಿಸಿ ದುಷ್ಕರ್ಮಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗುತ್ತಿದ್ದು, ಕೊಣಾಜೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter