Published On: Fri, May 18th, 2018

ಬಿಜೆಪಿ ವಿಜಯೋತ್ಸವದಲ್ಲಿ ಚರ್ಚ್ ಮೇಲೆ ದಾಳಿ ನಡೆದಿಲ್ಲ: ಪೊಲೀಸ್ ಕಮಿಷನರ್ ಸ್ಪಷ್ಟನೆ

rjp_180518_polcom2

ಮಂಗಳೂರುಬಿಜೆಪಿ ವಿಜಯೋತ್ಸವದ ವೇಳೆ ಚರ್ಚ್ ಮೇಲೆ ದಾಳಿಯಾಗಿದೆ ಎಂದು ಸುಳ್ಳು ಸುದ್ದಿ ಹರಡಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಕಮಿಷನರ್ ವಿಪುಲ್ ಕುಮಾರ್  ಎಚ್ಚರಿಕೆ ನೀಡಿದ್ದಾರೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಚರ್ಚ್ ಮೇಲೆ ದಾಳಿಯಾಗಿದೆ ಅನ್ನುವ ಆರೋಪವೊಂದು ಕೇಳಿಬಂದಿತ್ತು. ಕೆಲ ಕಿಡಿಗೇಡಿಗಳು ವಾಟ್ಸಪ್, ಫೇಸ್‌ಬುಕ್‌ ನಲ್ಲಿ ಚರ್ಚ್ ಮೇಲೆ ದಾಳಿಯಾಗಿದೆ ಎಂದು ಸುಳ್ಳು ಸುದ್ದಿ ಹರಿಯಬಿಟ್ಟಿದ್ದರು. ಈ ಸುಳ್ಳು ಹರಿಡಿಸಿರುವವ ವಿರುದ್ಧ ಸುಮೋಟೋ ಕೇಸು ದಾಖಲಿಸಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.

ಚುನಾವಣಾ ವಿಜಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಅಡ್ಯಾರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿ 8 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದರು.

 

 

 

 

 

 

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter