ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳು ಬಂಧನ
ಉಡುಪಿ: 2016 ಜುಲೈ ಉಡುಪಿಯಲ್ಲಿ ನಡೆದ ಖ್ಯಾತ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಕೊಲೆಯ ಪ್ರಮುಖ ಆರೋಪಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆ ನಿರಂಜನ್ ಭಟ್‍ರನ್ನು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ಈ ಸಂದರ್ಭದಲ್ಲಿ ಭಾಸ್ಕರ್ ಶೆಟ್ಟಿಯವರ ತಾಯಿ ಗುಲಾಬಿ ಕೂಡ ಹಾಜರಿದ್ದರು. ಎರಡು ವರ್ಷದ ಹಿಂದೆ ನಡೆದ ಈ ಘಟನೆಗೆ ಸಂಬಂಧಿಸಿದ ಸಾಕ್ಷ್ಯವನ್ನು ನಾಶಪಡಿಸಿದ ಹಿನ್ನೆಲೆಯಲ್ಲಿ ಪತ್ನಿ ರಾಜೇಶ್ವರಿ ಶೆಟ್ಟಿ ಹಾಗೂ ನಿರಂಜನ್ ಭಟ್‍ರನ್ನು ಬಂಧಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಬೆಂಗಳೂರು ಮಾರ್ಗವಾಗಿ ಉಡುಪಿ ನ್ಯಾಯಾಲಯಕ್ಕೆ ಕರೆತರಲಾಯಿತು.