Published On: Tue, Sep 11th, 2018

ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯಿಂದ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸಂಪ್ರದಾಯಿಕ ಆಹ್ವಾನ

ಬೆಳ್ತಂಗಡಿ: ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯು ತನ್ನ ಸುವರ್ಣ ಮಹೋತ್ಸವ ವರ್ಷಾಚರಣೆಯನ್ನು ಮಹಾನಗರಿಯಲ್ಲಿ ನವೆಂಬರ್‍ನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಿದ್ದು ಸಂಭ್ರಮವನ್ನು ಉದ್ಘಾಟಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪೂಜ್ಯ ಖಾವಂದರಾದ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸೊಸೈಟಿ ವತಿಯಿಂದ ಸಂಪ್ರದಾಯಿಕ ಆಹ್ವಾನ ನೀಡಲಾಯಿತು.

Kannada Welfare Society (1)

ಇತ್ತೀಚೆಗೆ ಧರ್ಮಸ್ಥಳಕ್ಕೆ ತೆರಳಿದ ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಾಬಾಳಿಕೆ ಅವರ ಮುಂದಾಳುತ್ವದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸಂಪ್ರದಾಯಿಕವಾಗಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ವೆಲ್ಫೇರ್‍ನ ಕಾರ್ಯದರ್ಶಿ ಸುಧಾಕರ ಎಲ್ಲೂರು, ಅಜೆಕಾರು ಬಾಲಕೃಷ್ಣ ಶೆಟ್ಟಿ, ದಿವಾಕರ ಶೆಟ್ಟಿ ಇಂದ್ರಾಳಿ ಮತ್ತು ಅಶೋಕ್ ಪಕ್ಕಳ ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter