Published On: Fri, Apr 26th, 2019

ಕಕ್ಯಪದವುಗರಡಿ ಬ್ರಹ್ಮ ಕಲಶ ಡಾ. ಹೆಗ್ಗಡೆ ಅವರಿಗೆ ಆಹ್ವಾನ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬÉೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ. ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಬ್ರಹ್ಮಕಲಶೋತ್ಸವಕ್ಕೆ ಆಹ್ವಾನಿಸಲು ಸಮಿತಿ ಪದಾಧಿಕಾರಿಗಳು ಎ.23ರಂದು ಧರ್ಮಸ್ಥಳಕ್ಕೆ ಭೇಟಿ ನೀಡಿದರು.

IMG-20190424-WA0034
ಗರಡಿ ಪುನರ್ನಿರ್ಮಾಣ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದ ಸಮಿತಿ ಡಾ. ಡಿ. ವೀರೇಂದ್ರ ಹೆಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ವಿಜ್ಞಾಪನಾ ಪತ್ರ ನೀಡಿ ಮೇ 19ರಂದು ನಡೆಯಲಿರುವ ಬ್ರಹ್ಮ ಕಲಶೋತ್ಸವಕ್ಕೆ ಆಮಂತ್ರಿಸಿದರು.

2404pkt2
ಪುನರ್ನಿರ್ಮಾಣ ಸಮಿತಿ ಅಧ್ಯಕ್ಷ ಬಿ. ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್‍ಬಿತ್ತ, ಪದಾಧಿಕಾರಿಗಳಾದ ಡಾ. ದಿನೇಶ್ ಬಂಗೇರ, ಪರಮೇಶ್ವರ ನಾಯ್ಕ, ಡೀಕಯ್ಯ ಕುಲಾಲ್, ರಾಜೀವ ಕೆ., ಗಣೇಶ ಕೋಂಗುಜೆ, ತಿಲಕ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಸಮಿತಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ ಆಳ್ವ ಅವರಿಗೂ ವಿಜ್ಞಾಪನಾ ಪತ್ರ ನೀಡಿ ಬ್ರಹ್ಮ ಕಲಶೋತ್ಸವಕ್ಕೆ ಆಮಂತ್ರಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter