Published On: Thu, Jul 18th, 2019

ಪಾಂಡವರಕಲ್ಲು: ಕಾಂಗ್ರೆಸ್‍ನಿಂದ ಪಂಚಾಯತ್ ಮಿಲನ

ಬಂಟ್ವಾಳ : ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರಗಳ ಗ್ರಾಮ ಪಂಚಾಯತ್‍ಗಳಲ್ಲಿ ಪಕ್ಷ ಬಲವರ್ಧನೆಗೆ ಹಾಗೂ ಸಂಘಟನೆಗೆ ಹಮ್ಮಿಕೊಂಡ ಪಂಚಾಯತ್ ಮಿಲನ ಕಾರ್ಯಕ್ರಮ ಬಡಗಕಜೆಕಾರು ಗ್ರಾಮ ಪಂಚಾಯತ್ ವಲಯ ಮಟ್ಟದಲ್ಲಿ ಪಾಂಡವರಕಲ್ಲು ಸಮುದಾಯ ಭವನದಲ್ಲಿ ಸಭಾಂಗಣದಲ್ಲಿ ಜು. 16ರಂದು ಸಂಜೆ ಜರಗಿತು.
ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಹಾಗೂ ಪಕ್ಷ ಬಲವಧರ್Àನೆಯಲ್ಲಿ ಹೆಚ್ಚು ಆಸಕ್ತಿ ವಹಿಸಿ ಪಕ್ಷದ ಮೇಲೆ ಪ್ರೀತಿಯಿಟ್ಟು ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಮುಂಬರುವ ಪಂಚಾಯತ್ ಚುನಾವಣೆಗೆ ಸಜ್ಜಾಗಬೇಕು ಎಂದು ಹೇಳಿದರು.

1707pkt2
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಬಿ ಕುಂದರ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಕ್ಷದಲ್ಲಿ ಶಿಸ್ತಿಗೆ ಹೆಚ್ಚು ಪ್ರಾಮುಖ್ಯತೆ ನೀಡಿ, ಕಾರ್ಯಕರ್ತರಿಂದ ಸಲಹೆ, ಸೂಚನೆಗಳನ್ನು ಸ್ವೀಕರಿಸಿ, ಪಕ್ಷವನ್ನು ಸಂಘಟಿಸಲಾಗುವುದು. ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷದ ಬಲವಧರ್ನೆಗೆ ಸಹಕಾರ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಂದಿನ ಅವ„ಗೆ ವಲಯ ಹಾಗೂ ಬೂತ್ ಸಮಿತಿಯನ್ನು ಪುನರ್ ರಚಿಸಲಾಯಿತು. ಗ್ರಾ.ಪಂ. ವಲಯ ಸಮಿತಿ ಅಧ್ಯಕ್ಷರಾಗಿ ಜಯ ಬಂಗೇರ ಅವರನ್ನು ಆಯ್ಕೆ ಮಾಡಲಾಯಿತು. ಕೆ. ಮೋನಪ್ಪ ಪೂಜಾರಿ ಕಂಡೆತ್ಯಾರು ಅವರು ಬಡಗಕಜೆಕಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಅಭಿವೃದ್ದಿ ಕಾರ್ಯಗಳ ವರದಿ ನೀಡಿದರು.
ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್, ಅಕ್ರಮ ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಗದೀಶ್ ಕೊೈಲ, ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್, ಬೂತ್ ಅಧ್ಯಕ್ಷ ಡೀಕಯ ಪೂಜಾರಿ, ಪ್ರಮುಖರಾದ ವಿಶ್ವನಾಥ ಪೂಜಾರಿ, ಇಬ್ರಾಹಿಂ, ಯಶವಂತ್, ಅಬ್ದುಲ್ಲಾ , ಸುರೇಶ್ ಪೂಜಾರಿ ಪಂಚಾಯತ್ ಸದಸ್ಯರಾದ ಸುರೇಶ್, ವಿನೋದಾ, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ತಾ.ಪಂ. ಮಾಜಿ ಅಧ್ಯಕ್ಷ ಕೆ.ಎ. ಸತೀಶ್ಚಂದ್ರ ಸ್ವಾಗತಿಸಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಡೀಕಯ ಬಂಗೇರ ವಂದಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter