Published On: Sat, Sep 21st, 2019

ಪತ್ರಕರ್ತರ ಸಂಘ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವನಮಹೋತ್ಸವ

ಮಂಗಳೂರು: ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತ್ತಿರುವ ಮಂಗಳೂರು ನಗರ ಅಭಿವೃದ್ಧಿಯ ಜತೆಗೆ ಹಸಿರೀಕರಣಕ್ಕೆ ವಿಶೇಷ ಆದ್ಯತೆ ನೀಡಬೇಕು. ನಗರದ ಕೆಲವು ವಾರ್ಡ್‌ಗಳಲ್ಲಿ ಶೇ.10ರಷ್ಟು ಹಸಿರೀಕರಣವಿಲ್ಲದಿರುವುದು ನಿಜಕ್ಕೂ ಭವಿಷ್ಯ ದೃಷ್ಟಿಯಿಂದ ಆತಂಕಕಾರಿ. ಪರಿಸರ ಸಂರಕ್ಷಿಸಿದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಹೇಳಿದರು. ದ.ಕ. ಜಿಲ್ಲಾ ಪತ್ರಕರ್ತರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಶನಿವಾರ ನಡೆದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

1 (1)
ಅರಣ್ಯ ಇಲಾಖೆ ಪರಿಸರ ಇಲಾಖೆ ಬಹಳಷ್ಟು ಕೆಲಸ ಮಾಡುತ್ತಿದ್ದು, ಪತ್ರಕರ್ತರ ಸಂಘವೂ ಸಾಥ್ ನೀಡುತ್ತಿರುವುದು ಖುಷಿಯ ವಿಚಾರ. ನಗರವನ್ನು ಹಸಿರೀಕರಣ ಮಾಡುವ ಉದ್ದೇಶದಿಂದ 10ಸಾವಿರ ಗಿಡ ನೆಡುವ ಕಾರ್ಯಕ್ರಮ ಈಗಾಗಲೇ ನಡೆದಿದ್ದು, ಮುಂದಿನ ದಿನಗಳಲ್ಲಿ ಪ್ರತಿ ವಾರ್ಡ್‌ಗಳಲ್ಲಿ ಈ ರೀತಿಯ ಕಾರ್ಯಕ್ರಮ ಆಗಬೇಕಿದೆ. ಪ್ರಕೃತಿ ವಿಕೋಪವನ್ನು ತಡೆಯಬೇಕಾದರೆ ಪ್ರಕೃತಿ ರಕ್ಷಣೆಯಾಗಬೇಕಿದೆ. ನಮ್ಮ ಹಿರಿಯರಿಂದ ಬಳುವಳಿಯಾದ ಈ ಪರಿಸರವನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಕೊಡುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

57fd2850-660b-4790-89f4-aa6c41075511

ವಲಯ ಅರಣ್ಯಾಧಿಕಾರಿ ಪಿ.ಶ್ರೀಧರ್ ಮಾತನಾಡಿ ಅರಣ್ಯ ಇಲಾಖೆಯಿಂದ ಗಿಡ ವಿತರಣೆ ಮಾಡುವುದು, ನೆಡುವುದು ಮುಖ್ಯ ಅಲ್ಲ. ಅದನ್ನು ಪೋಷಿಸುವ ಕೆಲಸವನ್ನು ಸ್ಥಳೀಯ ಸಂಘ-ಸಂಸ್ಥೆಗಳು ಮಾಡಿದಾಗ ಪರಿಸರ ಸಂರಕ್ಷಣೆ ಸಾಧ್ಯ. ಈಗಾಗಲೇ ಪರಿಸರ ಪ್ರಿಯರು, ಅರಣ್ಯ ಇಲಾಖೆ ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಮಾಡುತ್ತಿದ್ದು, ಸೆ.24ರಂದು ಬೆಳಗ್ಗೆ 9.30ಕ್ಕೆ ಪುರಭವನದಲ್ಲಿ ವೃಕ್ಷೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದರು.

3e3b059f-eaf1-43c8-b01f-944703b312ae
ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಹೆಚ್.ಆರ್. ನಾಯ್ಕ, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಮಹೇಶ್ ಕುಮಾರ್, ಪರಿಸರವಾದಿ ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.  ಕಾರ್ಯಕ್ರಮವನ್ನು ಪತ್ರಕರ್ತ ಜಿತೇಂದ್ರ ಕುಂದೇಶ್ವರ್ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter