Published On: Mon, Sep 23rd, 2019

ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಆಳ್ವಾಸ್ ಪಿಯು ಕಾಲೇಜು ಚಾಂಪಿಯನ್

ಮೂಡುಬಿದಿರೆ:ಪದವಿಪೂರ್ವ ಶಿಕ್ಷಣ ಇಲಾಖೆ, ದ.ಕ. ಹಾಗೂ ಅಲ್ಫುರ್ಕಾನ್ ಇಸ್ಲಾಮಿಕ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸ್ವರಾಜ್ಯ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆಯಿತು.mbd_sep23_4 (1)

15 ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ 15 ಚಿನ್ನ, 11 ಬೆಳ್ಳಿ ಪದಕಗಳನ್ನು ಪಡೆದು ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ 12 ಚಿನ್ನ, 12 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಪಡೆದು ಆಳ್ವಾಸ್ ಪ.ಪೂ. ಕಾಲೇಜು ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು.

mbd_sep23_4 (2)
ಬಾಲಕರ ವಿಭಾಗದಲ್ಲಿ ರೋಟರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು, ಬಾಲಕಿಯರ ವಿಭಾಗದಲ್ಲಿ ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter