Published On: Mon, Sep 23rd, 2019

ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಫುಟ್‍ಬಾಲ್ ಪಂದ್ಯಾಟ ಕೊಡಗು, ದ.ಕ ಜಿಲ್ಲೆ ಚಾಂಪಿಯನ್

ಮೂಡುಬಿದಿರೆ :ಸಾರ್ವಜನಿಕ ಶಿಕ್ಷಣ ಇಲಾಖೆ ಮೂಡುಬಿದಿರೆ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮತ್ತು ಮೂಡುಬಿದಿರೆಯ ಆಳ್ವಾಸ್ ಆಂಗ್ಲಮಾಧ್ಯಮ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ವಿದ್ಯಾಗಿರಿಯ ಪ್ಯಾಲೇಸ್ ಗ್ರೌಂಡ್‍ನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಫುಟ್‍ಬಾಲ್ ಪಂದ್ಯಾಟದ ಎರಡು ವಿಭಾಗಗಳಲ್ಲಿ ಕೊಡಗು ಜಿಲ್ಲೆ ಹಾಗೂ ಒಂದು ವಿಭಾಗದಲ್ಲಿ ದ.ಕ ಜಿಲ್ಲೆ ಚಾಂಪಿಯನ್ ಪ್ರಶಸ್ತಿಯನ್ನು ಪಡೆಯಿತು.

ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾಟದ 17 ವರ್ಷ ವಯೋಮಿತಿ ಬಾಲಕಿಯರ ವಿಭಾಗದಲ್ಲಿ ಕೊಡಗು ಚಾಂಪಿಯನ್ ಪ್ರಶಸ್ತಿಯನ್ನು ಪಡೆಯಿತು.

mbd_sep22_15 Kodagu girls
14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಚಾಂಪಿಯನ್ ಪ್ರಶಸ್ತಿಯನ್ನು ಪಡೆಯಿತು. ಕೊಡಗು ದ್ವಿತೀಯ ಸ್ಥಾನ ಪಡೆಯಿತು. 17 ವರ್ಷ ವಯೋಮಿತಿ ಬಾಲಕರ ವಿಭಾಗದಲ್ಲಿ ಕೊಡಗು ಪ್ರಥಮ, ಮಂಡ್ಯ ದ್ವಿತೀಯ ಸ್ಥಾನ ಪಡೆಯಿತು. 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಕೊಡಗು ಪ್ರಥಮ ಹಾಗೂ ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆಯಿತು. ಲೆವಿನ್(ಮಂಗಳೂರು), ಪುಷ್ಯಾ ಕೆ.ಪಿ( ಕೊಡಗು) ಮರ್ವಿನ್ ಜಾನ್ಸನ್(ಗೋಲ್‍ಕೀಪರ್) ಪಂದ್ಯಾಟದಲ್ಲಿ ಉತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದರು.

ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾಟದ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಚಾಂಪಿಯನ್ ಪ್ರಶಸ್ತಿಯನ್ನು ಪಡೆಯಿತು.

mbd_sep22_15 DK
ಭಾನುವಾರ ಸಾಯಂಕಾಲ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಿ.ಪಂ ಸದಸ್ಯ ಕೆ.ಪಿ ಸುಚರಿತ ಶೆಟ್ಟಿ ವಹಿಸಿದರು.. ಕ್ಷೇತ್ರಾ ಶಿಕ್ಷಣಾಧಿಕಾರಿ ಆಶಾ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ರಘುನಾಥ್, ಮೂಡುಬಿದಿರೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಮೂಡುಬಿದಿರೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನಯ ಕುಮಾರ್, ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ವಿಜಯ ಟಿ.ಮೂರ್ತಿ , ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಬಿ., ಆಳ್ವಾಸ್ ಶಾಲೆಯ ಸಹ ಆಡಳಿತಾಧಿಕಾರಿ ಚೈತ್ರ ಉಪಸ್ಥಿತರಿದ್ದರು.

 

ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾಟದ 17 ವರ್ಷ ವಯೋಮಿತಿ ಬಾಲಕರ ವಿಭಾಗದಲ್ಲಿ ಕೊಡಗು ಚಾಂಪಿಯನ್ ಪ್ರಶಸ್ತಿಯನ್ನು ಪಡೆಯಿತು.mbd_sep22_15 Kodagu Boys

ಪ್ರಕಾಶ್ ಸ್ವಾಗತಿಸಿದರು. ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆನಂದ ಪ್ರಶಸ್ತಿಗಳ ವಿಜೇತರ ವಿವರ ನೀಡಿದರು. ರೇಣುಕಾ ಕಾರ್ಯಕ್ರಮ ನಿರೂಪಿಸಿದರು. ಚಾಲನೆ: ಯುವಸಬಲಿಕರಣ ಮತ್ತು ಕ್ರೀಡಾ ಮಾಜಿ ಸಚಿವ ಕೆ. ಅಭಯಚಂದ್ರ ಶನಿವಾರ ಫುಟ್ಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ , ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿನಯಕುಮಾರ್, ಆಳ್ವಾಸ್ ಆಂಗ್ಲಮಾಧ್ಯಮ ಪ್ರೌಢಶಾಲಾ ಮುಖ್ಯಶಿಕ್ಷಕಿ ವಿಜಯಾ ಟಿ. ಮೂರ್ತಿ, ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯಶಿಕ್ಷಕ ಪ್ರಶಾಂತ್ ಬಿ., ಸಹ ಆಡಳಿತಾಧಿಕಾರಿ ಚೈತ್ರಾ ರೈ ಉಪಸ್ಥಿತರಿದ್ದರು. ಸುಜಾತಾ ನಿರೂಪಿಸಿದರು. ಪ್ರಭಾವತಿ ವಂದಿಸಿದರು.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter