Published On: Mon, Dec 9th, 2019

ಶಾಲಾ ಕೊಠಡಿ ,ಸಭಾಂಗಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಎಂ.ಆರ್.ಪಿ.ಎಲ್ ಮಂಗಳೂರು ಮತ್ತು ಮಾತಾ ಡೆವಲಪರ್ಸ್ ಪ್ರೈ. ಲಿ. ಸುರತ್ಕಲ್ ಸಹಯೋಗದಲ್ಲಿ ನಿರ್ಮಿಸಲಾಗುವ 10 ಕೊಠಡಿ ಮತ್ತು ಸಭಾಂಗಣ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಮತ್ತು ಶಾಲಾ 99ನೇ ವಾರ್ಷಿಕೋತ್ಗವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮಜಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಹಿರಿಯ ವಿದ್ಯಾರ್ಥಿಗಳು ಶಾಲಾಭಿವೃದ್ಧಿಯಲ್ಲಿ ಪೂರಕವಾಗಿ ತೊಡಗಿಸಿಕೊಂಡಾಗ ವಿದ್ಯಾದೇಗುಲ ಅಭಿವೃದ್ಧಿಗೊಳ್ಳುವುದರಲ್ಲಿ ಸಂಶವಯಿಲ್ಲ ಎಂದರು.
IMG-20191208-WA0040
ಶಾಲೆ ದತ್ತು ಸ್ವೀಕರಿಸಿದ ಮಾತಾ ಡೆವಲಪರ್ಸ್ ಪ್ರೈ. ಲಿ. ಮುಖ್ಯಸ್ಥ ಹಾಗೂ ಹಳೇ ವಿದ್ಯಾರ್ಥಿ ಸಂತೋಷ್ ಶೆಟ್ಟಿ ಅರೆಬೆಟ್ಟು ಶಾಲೆಯ ಅಭಿವೃದ್ಧಿಯ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಶಾಲಾ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಲಾಂಛನ  ಅನಾವರಣಗೊಳಿಸಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯೆ ಮಂಜುಳಾ ಮಾಧವ ಮಾವೆ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ವೀರಕಂಭ ಗ್ರಾಪಂ ಅಧ್ಯಕ್ಷೆ ಪ್ರೇಮಲತಾ, ಉಪಾಧ್ಯಕ್ಷ ವಿ.ಕೆ.ಅಬ್ಬಾಸ್, ಸದಸ್ಯರಾದ ಜಯಂತಿ ಜನಾರ್ದನ, ಪದ್ಮಾವತಿ, ಜಯಂತಿ, ಜನಾರ್ದನ ಪೂಜಾರಿ, ರಾಮಚಂದ್ರ ಪ್ರಭು,
IMG-20191208-WA0037
ಗಣ್ಯರಾದ ಎಂ.ತಿರುಮಲ ಕುಮಾರ್ ಮಜಿ, ಈಶ್ವರ ಭಟ್ ನಗ್ರಿಮೂಲೆ, ಎನ್. ದಿಲೀಪ್ ಕುಮಾರ್ ಎಂ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ನಿವೃತ್ತ ಡಿಜಿಎಂ ಉಗ್ಗಪ್ಪ ಶೆಟ್ಟಿ ಕೊಂಬಿಲ, ವಿಶ್ವನಾಥ ಎಂ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಜಯರಾಜ್ ಎಸ್. ಬಂಗೇರ, ಲಯನ್ಸ್ ಕ್ಲಬ್ ಬಂಟ್ವಾಳ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೇಲ್ಕಾರ್, ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಹರೀಶ ಮಾಂಬಾಡಿ, ನಿವೃತ್ತ ಮುಖ್ಯ ಶಿಕ್ಷಕ ವಿಠಲ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಮೂಲ್ಯ,ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ರಮೇಶ ಗೌಡ, ವಿದ್ಯಾರ್ಥಿ ನಾಯಕ ಉದಿತ್ ರಾಜ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಎನ್.ಕೆ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹರಿಣಾಕ್ಷಿ ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಹಳೇ ವಿದ್ಯಾರ್ಥಿ ಚಿನ್ನ ಮೈರ ಸಹಕರಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter