Published On: Wed, Jan 29th, 2020

ಅಭಿವೃದ್ಧಿಗೆ ಅಧಿಕಾರಿಗಳ ಅಡ್ಡಿ-ಶಾಸಕ ರಘುಪತಿ ಭಟ್ ಆಕ್ರೋಶ- DFO ವಿರುದ್ಧ ಕ್ರಮ ಕೈಗೊಳ್ಳಲು ಸರ್ವಾನುಮತದ ನಿರ್ಣಯ

ಉಡುಪಿ ಜಿಲ್ಲಾ ಪಂಚಾಯತ್ ನ ೧೯ನೇ ಸಾಮಾನ್ಯ ಸಭೆಯಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರು ಭಾಗವಹಿಸಿ ಹಲವಾರು ವಿಚಾರಗಳ ಬಗ್ಗೆ ಧ್ವನಿ ಎತ್ತಿ ಅಭಿವೃದ್ಧಿಗೆ ಆಗುತ್ತಿರುವ ಹಿನ್ನಡೆ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿದರು. ಈ ವೇಳೆ ಆಕ್ರೋಶ ಹೊರಹಾಕಿದ ಶಾಸಕರು ಅರಣ್ಯ ಪ್ರದೇಶದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಭಿವೃದ್ಧಿಗೆ ಭಾರೀ ಪ್ರಮಾಣದ ಹಿನ್ನಡೆ ಆಗುತ್ತಿದೆ. ಡೀಮ್ಡ್ ಫಾರೆಸ್ಟ್ ಎಂಬ ನೆಪದಲ್ಲಿ ಸದ್ಯ ಇರುವ ರಸ್ತೆಗಳನ್ನು ಡಾಮರೀಕರಣ ಅಥವಾ ಕಾಂಕ್ರೀಟೀಕರಣ ಮಾಡಲು ಅಧಿಕಾರಿಗಳು ಅಡ್ಡಿಯಾಗುತ್ತಿದ್ದಾರೆ. ಹೀಗಾಗಿ ಆ ಭಾಗದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
IMG-20200129-WA0015
ಮಾತ್ರವಲ್ಲದೆ ಈವರೆಗೆ ಅರಣ್ಯ ಇಲಾಖೆಯ ಅಧಿಕಾರಿ (DFO) ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಗೆ ಬರಲಿಲ್ಲ. ಅಧಿಕಾರಿ ವರ್ತನೆ ಬಗ್ಗೆ ಶಾಸಕರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಅಸಮಧಾನ ವ್ಯಕ್ತಪಡಿಸಿದ್ದು  ಆ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು* *ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಸರ್ವ ಜಿಲ್ಲಾ ಪಂಚಾಯತ್ ಸದಸ್ಯರ ಮೂಲಕ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನೀಡುವುದೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮೂಲಕ ನಿರ್ಣಯಿಸಲಾಯಿತು ,ನಂತರ ಶಾಸಕರು ಉಡುಪಿ ಜಿಲ್ಲೆಯ ವಿವಿಧ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸ ಇದನ್ನು ಪರಿಹರಿಸುವ ಬಗ್ಗೆ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಳ್ಳಿ, ಕೃಷಿ & ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಸಮಿತ್ ಶೆಟ್ಟಿ ಕೌಡೂರು,ಜಿಲ್ಲಾ ಪಂಚಾಯತ್ ಸಿಇಒ ಪ್ರೀತಿ ಗೆಹ್ಲೋಟ್ ಹಾಗೂ ಇನ್ನಿತರ ಅಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter