Published On: Mon, Feb 17th, 2020

ಕಲ್ಪನೆ ಎರಡು ಬಸ್‌‌ ಗಳ ನಡುವೆ ಡಿಕ್ಕಿ: 54 ಜನರಿಗೆ ಗಾಯ 5ಜನ ಗಂಭೀರ

ಕೈಕಂಬ: ಬಿ.ಸಿ. ರೋಡ್- ಪೊಳಲಿ ರಸ್ತೆಯ ಕಲ್ಪನೆ ತಿರುವಿನಲ್ಲಿ ಎರಡು ಬಸ್‌‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿವೆ.ಎರಡೂ ಬಸ್‌ಗಳು ಬಿ.ಸಿ.ರೋಡ್‌ನಿಂದ ಪೊಳಲಿ ಕಡೆಗೆ ಸಂಚರಿಸುತ್ತಿದ್ದವು.

16 axident 2ಒಂದರ ಹಿಂದೊಂದು ಬರುತ್ತಿದ್ದ ಬಸ್‌‌ಗಳು, ಕಲ್ಪನೆ ತಿರುವಿನಲ್ಲಿ ಡಿಕ್ಕಿಯಾಗಿದ್ದು, ಮುಂದಿನಿಂದ ಹೋಗುತ್ತಿದ್ದ ರೂಟ್ ಬಸ್‌‌ಗೆ ಹಿಂದಿನಿಂದ ಬರುತ್ತಿದ್ದ ಮದುವೆ ದಿಬ್ಬಣದ ಬಸ್ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್‌‌ನಲ್ಲಿ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ನೂರಾರು ಜನರು ಸೇರಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

16 axident 3

16 axident 5

16 axident1

16 axident 7

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter